ಮಂಗಳೂರಿನ ಮಳಲಿಯ ಮಸೀದಿ ಸ್ಥಳದಲ್ಲಿ ದೇವರು ಇರುವುದು ನಿಜ: ತಾಂಬೂಲ ಪ್ರಶ್ನೆಗೆ ಕೇರಳದ ಪ್ರಖ್ಯಾತ ಜ್ಯೋತಿಷ್ಯಿಯಿಂದ ಉತ್ತರ

posted in: ರಾಜ್ಯ | 0

ಮಂಗಳೂರು: ಮಳಲಿ ಮಸೀದಿ ನವೀಕರಣದ ವೇಳೆ ದೇವಾಲಯದ ಮಾದರಿ ರಚನೆ ಪತ್ತೆಯಾದ ಹಿನ್ನೆಲೆಯಲ್ಲಿ ದೈವ ಸಾನಿಧ್ಯ ದೃಢೀಕರಣಕ್ಕಾಗಿ ಬುಧವಾರ ಬೆಳಗ್ಗೆ 8 ಗಂಟೆಯಿಂದ ರಾಮಾಂಜನೇಯ ಭಜನಾ ಮಂದಿರದಲ್ಲಿ ತಾಂಬೂಲ ಪ್ರಶ್ನೆ ಆರಂಭವಾಗಿದ್ದು, ಈ ವೇಳೆ ಕೇರಳ ದೈವಜ್ಞರು ಸ್ಥಳದಲ್ಲಿ ಈ ಹಿಂದೆ ದೇವದಾಲಯವಿತ್ತು, ವಿವಾದದಿಂದ ದೇವಾಲಯ ನಾಶಪಡಿಸಲಾಗಿದೆ ಎಂದು ಹೇಳಿದ್ದಾರೆ.
ಕಳೆದ ತಿಂಗಳು ನವೀಕರಣಕ್ಕಾಗಿ ಅಸಯ್ಯಿದ್ ಅಬ್ದುಲ್ಲಾ ಹಿಲ್ ಮದನಿ ದರ್ಗಾ ಮುಂಭಾಗವನ್ನು ಕೆಡವಲಾಗಿತ್ತು. ಈ ದರ್ಗಾದ ಹಿಂಭಾಗದಲ್ಲಿ ದೇವಸ್ಥಾನದ ಕಲಶ, ತೋಮರ, ಕಂಬಗಳ ಮಾದರಿ ಪತ್ತೆಯಾಗಿದ್ದು, ಇಲ್ಲಿ ಹಿಂದೆ ಹಿಂದೂ ಅಥವಾ ಜೈನ್‌ ದೇವಸ್ಥಾನ ಇರುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಹೀಗಾಗಿ ವಿಶ್ವ ಹಿಂದೂ ಪರಿಷತ್, ಜಾಗದ ಧಾರ್ಮಿಕ ಮಹತ್ವ ತಿಳಿಯಲು ನಿರ್ಧರಿಸಿ ತಾಂಬೂಲ ಪಶ್ನೆ ಇಡಲು ತೀರ್ಮಾನಿಸಿತ್ತು.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ತಾಂಬೂಲ ಪ್ರಶ್ನೆ ವೇಳೆ ಕೇರಳದ ಪ್ರಖ್ಯಾತ ಜ್ಯೋತಿಷಿ ದೈವಜ್ಞ ಗೋಪಾಲಕೃಷ್ಣ ಪಣಿಕ್ಕರ್ ಅವರು ಉತ್ತರ ನೀಡಿದ್ದು, ಮಳಲಿಯ ಮಸೀದಿ ಸ್ಥಳದಲ್ಲಿ ದೇವರು ಇರುವುದು ನಿಜ ಎಂದು ಹೇಳಿದ್ದಾರೆ.
ಸಾಮಾನ್ಯ ತಾಂಬೂಲ ಪ್ರಶ್ನೆಯಲ್ಲಿ ಪೂರ್ಣವಾದ ಚೈತನ್ಯವಿದೆ. ನಾವು ಪ್ರಾರ್ಥಿಸಿ ಇಟ್ಟ ರಾಶಿಯಲ್ಲಿ ದೇವರು ಇರುವುದು ನಿಜ. ಪೂರ್ವದಲ್ಲಿ ಇದೊಂದು ಮಠದ ರೂಪದಲ್ಲಿತ್ತು. ಇದು ದೈವ ಸಾನ್ನಿಧ್ಯ ಇದ್ದಂತಹ ಸ್ಥಳ. ವಿವಾದದಿಂದಾಗಿ ದೇವಾಲಯ ನಾಶಪಡಿಸಿ, ಮಸೀದಿ ಕಟ್ಟಲಾಗಿದೆ. ದೇವಾಲಯವನ್ನು ಮರುಸ್ಥಾಪಿಸಬೇಕಿದೆ ಎಂದು ಹೇಳಿದ್ದಾರೆ.

ಓದಿರಿ :-   ಸರ್ಕಾರಿ ಕಾಲೇಜಿನಲ್ಲಿ ಪಿಯು ಓದುವ ವಿದ್ಯಾರ್ಥಿನಿಯರಿಗೆ ಸಿಹಿಸುದ್ದಿ : ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ

ಪುರಾತನ ಕಾಲದಲ್ಲಿ ಈ ಸ್ಥಳದಲ್ಲಿ ಗುರುಮಠದ ಸಾನಿಧ್ಯ ಇರುವುದು ತಾಂಬೂಲ ಪ್ರಶ್ನೆಯಲ್ಲಿ ತಿಳಿದುಬಂದಿದೆ. ಹಿಂದಿನ ಕಾಲದಲ್ಲಿ ವಿವಾದದಿಂದ ಹಾಳಾಯಿತು. ಆ ಸಂದರ್ಭದಲ್ಲಿ ಒಂದು ಮರಣವೂ ಆಗಿದೆ. ನಾಶವಾದಾಗ ಈ ಸ್ಥಳದಲ್ಲಿ ಇದ್ದವರು ಇಲ್ಲಿಂದ ಹೋಗಿದ್ದಾರೆ. ಇಲ್ಲಿಂದ ಮಠವನ್ನು ಕೂಡ ಬೇರೆಡೆ ಸ್ಥಳಾಂತರ ಮಾಡಿದ್ದಾರೆ. ಆದರೆ, ಅವರು ಪೂರ್ಣವಾಗಿ ಕೊಂಡು ಹೋಗಿಲ್ಲ. ಅರ್ಧ ಸಾನಿಧ್ಯ ಇಲ್ಲಿಯೇ ಉಳಿದಿದೆ. ಈಗ ಈ ಜಾಗದ ಮಾಲಕತ್ವ ಹೊಂದಿರುವವರೂ ಸೇರಿದಂತೆ ಎಲ್ಲರೂ ಒಟ್ಟಾಗಿ ಜೀರ್ಣೋದ್ಧಾರ ಮಾಡಬೇಕು. ಈ ಪ್ರದೇಶದಲ್ಲಿ ಶಿವಕಲೆಯಿದೆ. ಅಲ್ಲಿ ಶಿವಸಾನಿಧ್ಯವಿದೆ. ಇದರ ಆರಾಧನೆ ಮಾಡಿದ ಪೂರ್ವಿಕರ ಮನೆಯಲ್ಲಿ ಈಗಲೂ ಪೂಜೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಈ ನಡುವೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಜಿಲ್ಲಾಡಳಿತ ಪರಿಸ್ಥಿತಿಯನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಅಗತ್ಯ ಕ್ರಮಗಳ ಕೈಗೊಂಡಿದೆ. ಈಗಾಗಲೇ ಸ್ಥಳದಲ್ಲಿ ಸೆಕ್ಷನ್ 144 ಜಾರಿ ಮಾಡಿದೆ ಎಂದು ಹೇಳಿದ್ದಾರೆ.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

advertisement

ನಿಮ್ಮ ಕಾಮೆಂಟ್ ಬರೆಯಿರಿ