ಕಾರು ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿನಿಯರು ಸ್ಥಳದಲ್ಲೇ ಸಾವು, ಮೂವರಿಗೆ ಗಾಯ; ಚಾಲಕ ಪರಾರಿ

ಬಾಗಲಕೋಟೆ: ಶಾಲೆ ಮುಗಿಸಿ ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಮೂವರು ಗಾಯಗೊಂಡಿರುವ ಘಟನೆ ಹುನಗುಂದ ತಾಲೂಕಿನ ಕ್ಯಾದಿಗೇರಿ ಕ್ರಾಸ್ ನಲ್ಲಿ ಬುಧವಾರ (ಮೇ 25) ಸಂಜೆ ನಡೆದಿದೆ.
ಮೃತ ವಿದ್ಯಾರ್ಥಿನಿಯರನ್ನು ನೇತ್ರಾವತಿ ರಗಟಿ ‌(14), ಅಂಜಲಿ ಸೂಡಿ (14) ಎಂದು ಹೇಳಲಾಗಿದೆ.

ಶಾಲೆ ಮುಗಿಸಿ ಐಹೊಳೆಯಿಂದ -ಚಿಲ್ಲಾಪುರಕ್ಕೆ ಮನೆಯ ಕಡೆ ವಿದ್ಯಾರ್ಥಿಗಳು ಬರುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ಎಂಟನೇ ತರಗತಿ ವಿದ್ಯಾರ್ಥಿಗಳಿಬ್ಬರು ಮೃತಪಟ್ಟಿದ್ದು, ಇನ್ನು ಮೂವರಿಗೆ ಗಾಯಗಳಾಗಿವೆ. ಅವರನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ಒಯ್ಯಲಾಗಿದೆ. ಕಾರು ಚಾಲಕ ಘಟನೆಯ ಬಳಿಕ ಪರಾರಿಯಾಗಿದ್ದಾನೆ. ಚಾಲಕ ಕುಡಿದು ಕಾರಿ ಚಲಾಯಿಸುತ್ತಿದ್ದ ಎಂದು ಹೇಳಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಮೀನಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement