ಲಾಹೋರ್​ನಲ್ಲಿ ಪೆಟ್ರೋಲ್ ಇಲ್ಲ, ಎಟಿಎಂನಲ್ಲಿ ಹಣವಿಲ್ಲ; ಭಾರೀ ಚರ್ಚೆಗೆ ಕಾರಣವಾಯ್ತು ಪಾಕ್‌ ಕ್ರಿಕೆಟ್‌ ತಂಡದ ಮಾಜಿ ನಾಯಕ ಮಾಡಿದ ಟ್ವೀಟ್‌

ನವದೆಹಲಿ:ಶ್ರೀಲಂಕಾದಲ್ಲಿ ಆರ್ಥಿಕ ಸಂಕಷ್ಟದಿಂದಾಗಿ 1 ಲೀಟರ್ ಪೆಟ್ರೋಲ್​ಗೆ 420 ರೂ. ಆಗಿದೆ. ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಕೂಗಗನಕ್ಕೇರಿದ್ದು, ಈ ಮೂಲಕ ಶ್ರೀಲಂಕಾದಲ್ಲಿ ಬದುಕುವುದೇ ಕಷ್ಟ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಈಗ ನೆರೆಯ ರಾಷ್ಟ್ರವಾದ ಪಾಕಿಸ್ತಾನದಲ್ಲಿ ಕೂಡ
ಶ್ರೀಲಂಕಾ ರೀತಿಯದ್ದೇ ಪರಿಸ್ಥಿತಿ ಎದುರಾಗಿದೆಯಾ ಎಂಬ ಚರ್ಚೆಗಳು ಶುರುವಾಗಿವೆ. ಈ ಚರ್ಚೆಗೆ ಕಾರಣವಾಗಿದ್ದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಟ್ವೀಟ್.

ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಹಫೀಜ್ ಪಾಕಿಸ್ತಾನದಲ್ಲಿ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಟ್ವೀಟ್‌ ಮೂಲಕ ಎತ್ತಿ ತೋರಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ಅದಕ್ಕೆ ಪಾಕಿಸ್ತಾನದ ಪ್ರಧಾನಿ ಶಾಬಾಜ್‌ ಶೆರೀಫ್‌ ಹಾಗೂ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರನ್ನು ಸಹ ಟ್ಯಾಗ್‌ ಮಾಡಿದ್ದಾರೆ. ಇದು ಈಗ ಭಾರೀ ಚರ್ಚೆಗೆ ಕಾರಣವಾಗಿದೆ. ಶ್ರೀಲಂಕಾದಂತೆ ಪಾಕಿಸ್ತಾನದಲ್ಲೂ ಆರ್ಥಿಕ ಬಿಕ್ಕಟ್ಟು ಎದುರಾಗಿದೆಯಾ ಎಂಬ ಅನುಮಾನಕ್ಕೆ ಕಾರಣವಾಗಿದೆ.

ಹಫೀಜ್‌ ಅವರು ತಮ್ಮ ಟ್ವೀಟರಿನಲ್ಲಿ ಲಾಹೋರ್‌ನ ನಿಲ್ದಾಣದಲ್ಲಿ ಪೆಟ್ರೋಲ್ ಇಲ್ಲ, ಎಟಿಎಂನಲ್ಲಿ ಹಣವಿಲ್ಲ’ ಎಂದು ಪೋಸ್ಟ್ ಮಾಡಿರುವುದು ಪಾಕಿಸ್ತಾನದ ಆರ್ಥಿಕತೆ ಬಗ್ಗೆ ಪ್ರಶ್ನೆಗಳಿಗೆ ಕಾರಣವಾಗಿದೆ. ಈ ವರ್ಷ ಮಾರ್ಚ್ 10ರಂದು ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯದ ಮೂಲಕ ಮಾಜಿ ಕ್ರಿಕೆಟಿಗ ಹಾಗೂ ಪಾಕಿಸ್ತಾನದ ಪ್ರಧಾನಿಯಾಗಿದ್ದ ಇಮ್ರಾನ್ ಖಾನ್ ಅವರನ್ನು ಪದಚ್ಯುತಗೊಳಿಸಿದ ಬಳಿಕ ಪಾಕಿಸ್ತಾನದ ಆಡಳಿತದಲ್ಲಿ ಬದಲಾವಣೆಗಳು ಉಂಟಾದವು.

ಏಪ್ರಿಲ್ 10ರಂದು ಪಾಕಿಸ್ತಾನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಲಾಯಿತು. ವಿಶ್ವಾಸ ಮತಯಾಚನೆ ವೇಳೆ ಇಮ್ರಾನ್ ಖಾನ್ ಬಹುಮತ ಸಾಬೀತುಪಡಿಸಲು ವಿಫಲರಾದ್ದರಿಂದ ಅವರನ್ನು ಅಧಿಕಾರದಿಂದ ಕೆಳಗಿಳಿಸಲಾಯಿತು. ಈ ಮೂಲಕ ಇಮ್ರಾನ್ ಖಾನ್ ಅವಿಶ್ವಾಸ ಮತದ ಮೂಲಕ ಅಧಿಕಾರದಿಂದ ತೆಗೆದುಹಾಕಲ್ಪಟ್ಟ ಪಾಕಿಸ್ತಾನದ ಮೊದಲ ಪ್ರಧಾನ ಮಂತ್ರಿಯಾದರು.
ವಿಶ್ವಾಸಮತ ಯಾಚನೆಯ ನಂತರ ವಿರೋಧ ಪಕ್ಷಗಳಿಂದ ಶೆಹಬಾಜ್ ಷರೀಫ್ ಅವರನ್ನು ಪ್ರಧಾನಿಯಾದರು. ‘ಲಾಹೋರ್‌ನ ಯಾವುದೇ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಲಭ್ಯವಿಲ್ಲವೇ? ಎಟಿಎಂ ಯಂತ್ರಗಳಲ್ಲಿ ನಗದು ಲಭ್ಯವಿಲ್ಲವೇ? ಸಾಮಾನ್ಯ ಜನರು ರಾಜಕೀಯ ನಿರ್ಧಾರಗಳಿಂದ ಏಕೆ ಬಳಲಬೇಕಾಗಿದೆ?’ ಎಂದು ಪಾಕಿಸ್ತಾನದ ಮಾಜಿ ಆಲ್‌ರೌಂಡರ್ ಟ್ವಿಟರ್‌ನಲ್ಲಿ ಬರೆದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ ಹಾಗೂ ಪ್ರಸ್ತುತ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಸೇರಿದಂತೆ ಅನೇಕ ರಾಜಕಾರಣಿಗಳಿಗೆ ಟ್ಯಾಗ್ ಮಾಡಿದ್ದಾರೆ. ಹಾಗೂ ಪಾಕಿಸ್ತಾನದಲ್ಲಿ ಸಾಮಾನ್ಯ ವ್ಯಕ್ತಿ ಎದುರಿಸುತ್ತಿರುವ ಸಮಸ್ಯೆಗಳನ್ನು ಎತ್ತಿ ತೋರಿಸಿದ್ದಾರೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement