ಆನೆಗೊಂದಿ: ತಡರಾತ್ರಿ ಊಟ ಇಲ್ಲ ಎಂದಿದ್ದಕ್ಕೆ ಅಡುಗೆ ಸಿಬ್ಬಂದಿ ಕೂಡಿಹಾಕಿ ಡಾಬಾಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು…!

posted in: ರಾಜ್ಯ | 0

ಕೊಪ್ಪಳ: ರಾತ್ರಿ ಹನ್ನೊಂದುವರೆ ಗಂಟೆಯ ಬಳಿಕ ಊಟ ಇಲ್ಲ ಎಂದು ಹೇಳಿದ್ದಕ್ಕೆ ಆಕ್ರೋಶಗೊಂಡ ಅಪರಿಚಿತರು ಡಾಬಾಕ್ಕೆ ಬೆಂಕಿ ಹಚ್ಚಿದ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ.

advertisement

ತಡರಾತ್ರಿ ಊಟ ನಿರಾಕರಿಸಿದ್ದರಿಂದ ಸಿಟ್ಟುಗೊಂಡ ಕಿಡಿಗೇಡಿ ಯುವಕರು ಅಡುಗೆ ಸಿಬ್ಬಂದಿಗೆ ಗೊತ್ತಾಗದಂತೆ ಕೋಣೆಯ ಹೊರಗಿನಿಂದ ಚಿಲಕ ಹಾಕಿ ಕೂಡಿಹಾಕಿದ್ದಾರೆ. ಬಳಿಕ ಡಾಬಾಕ್ಕಿದ್ದ ನೀರಿನ ಸಂಪರ್ಕ ಕಡಿತಗೊಳಿಸಿ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಗುಡಿಸಲು ಮಾದರಿಯಲ್ಲಿದ್ದ ಮಂಗಳೂರು ಹೆಂಚಿನ ಹೊದಿಕೆಯ ಒಟ್ಟು 11 ಕೊಠಡಿಗಳು ಬೆಂಕಿಗೆ ಆಹುತಿಯಾಗಿವೆ ಎಂದು ಹೇಳಲಾಗಿದೆ.

ಅಡುಗೆ ಕೋಣೆಯಲ್ಲಿ ಬಂಧಿಗಳಾಗಿದ್ದ ಸಿಬ್ಬಂದಿ ಫೋನ್ ಮೂಲಕ ಆನೆಗೊಂದಿ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕಾಗಮಿಸಿದ ಗ್ರಾಮಸ್ಥರು ಹೊಟೇಲ್‌ ಸಿಬ್ನಂದಿಯನ್ನು ರಕ್ಷಿಸಿದ್ದಾರೆ. ಬೆಂಕಿ ನಂದಿಸುವ ಹೊತ್ತಿಗಾಗಲೇ ಹೊಟೇಲ್​​ನ ಬಹುತೇಕ ಭಾಗ ಸುಟ್ಟು ಹೋಗಿಗಿದೆ. ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಸಿಎಂ ಬೊಮ್ಮಾಯಿ, ಯಡಿಯೂರಪ್ಪ, ದತ್ತಾತ್ರೇಯ ಹೊಸಬಾಳೆ ಸಿದ್ದರಾಮಯ್ಯ ಸೇರಿ ಹಲವರ ಸಂತಾಪ

ನಿಮ್ಮ ಕಾಮೆಂಟ್ ಬರೆಯಿರಿ

advertisement