ಮಂಗಳೂರು ವಿವಿ ಕಾಲೇಜಿನಲ್ಲಿ ಮತ್ತೆ ಹಿಜಾಬ್‌ ವಿವಾದ: ವಿದ್ಯಾರ್ಥಿಗಳಿಂದ ಪ್ರತಿಭಟನೆ

posted in: ರಾಜ್ಯ | 0

ಮಂಗಳೂರು: ಇಲ್ಲಿನ ವಿವಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಮುಂದುವರೆದಿದ್ದು, ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬಂದಿರವುದನ್ನು ವಿರೋಧಿಸಿ ಮಂಗಳೂರಿನ ಹಂಪನ ಕಟ್ಟೆ ಯುನಿವರ್ಸಿಟಿ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದ್ದಾರೆ.
ಕಾಲೇಜಿನಲ್ಲಿ ಹೈಕೋರ್ಟ್‌ ತೀರ್ಪನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿಲ್ಲ. ಕೆಲವು ವಿದ್ಯಾರ್ಥಿನಿಯರು ತರಗತಿಗೆ ಹಿಜಾಬ್‌ ಧರಿಸಿ ಬರುತ್ತಿದ್ದಾರೆ. ಈ ಬಗ್ಗೆ ಕಾಲೇಜು ಆಡಳಿತ ಮಂಡಳಿಗೆ ದೂರು ನೀಡಿದ್ದೆವು. ಆದರೆ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಕೆಲವು ದಿನಗಳ ಹಿಂದೆ ಕಾಲೇಜು ಆಡಳಿತ ಮಂಡಳಿ ಸಭೆ ನಡೆಸಿದ್ದು, ಸಭೆಯಲ್ಲಿ ಹಿಜಾಬ್ ಧರಿಸದಂತೆ ತೀರ್ಮಾನಿಸಲಾಗಿತ್ತು. ಆದರೆ ಕೆಲ ವಿದ್ಯಾರ್ಥಿನಿಯರು ಕಾಲೇಜಿಗೆ ಇಂದು ಹಿಜಾಬ್ ಧರಿಸಿ ಬಂದಿದ್ದು, ಪ್ರತಿಭಟನೆಗೆ ಕಅರಣವಾಗಿದೆ ಎಂದು ಹೇಳಲಾಗಿದೆ.
ಕಾಲೇಜಿಗೆ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಿಜಾಬ್ ವಿರೋಧಿಸಿ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿನಿಯರಿಗೆ ಸಮವಸ್ತ್ರದ ಶಾಲು ತಲೆಗೆ ಹಾಕಿಕೊಳ್ಳಲು ಅವಕಾಶ ನೀಡಿತ್ತು. ಆದರೆ ಇತ್ತೀಚೆಗೆ ವಿವಿ ಸಿಂಡಿಕೇಟ್ ಅದಕ್ಕೂ ಅವಕಾಶ ನೀಡಬಾರದು ಎಂದು ಹೇಳಿದ್ದರಿಂದ ಅದನ್ನು ಕೂಡ ಜಾರಿಗೊಳಿಸುತ್ತಿದ್ದೇವೆ ಎಂದು ಕಾಲೇಜು ಪ್ರಾಂಶುಪಾಲರು ತಿಳಿಸಿದ್ದಾರೆ.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
ಓದಿರಿ :-   ಭ್ರಷ್ಟಾಚಾರ ಆರೋಪದ ಬೆನ್ನಲ್ಲೇ ಬೆಂಗಳೂರು ನಗರ ಜಿಲ್ಲಾಧಿಕಾರಿ ಎತ್ತಂಗಡಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ