ಜಮ್ಮು-ಕಾಶ್ಮೀರ : ಎನ್‌ಕೌಂಟರ್‌ನಲ್ಲಿ 3 ಎಲ್‌ಇಟಿ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಗುರುವಾರ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ್ದು, ಮೂವರು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕರನ್ನು ಹತ್ಯೆ ಮಾಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಪ್ವಾರದ ಜುಮಗುಂಡ್ ಗ್ರಾಮದಲ್ಲಿ ಭಯೋತ್ಪಾದಕರ ಒಳನುಸುಳುವಿಕೆ ಯತ್ನದ ಬಗ್ಗೆ ಪೊಲೀಸರು ಪಡೆದ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ, ಸೇನೆ ಮತ್ತು ಪೊಲೀಸರು ಭಯೋತ್ಪಾದಕರನ್ನು ತಡೆದಿದ್ದಾರೆ” ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆಯಿತು, ಇದರಲ್ಲಿ ಮೂವರು ಭಯೋತ್ಪಾದಕರನ್ನು ಕೊಲ್ಲಲಾಯಿತು ಎಂದು ಅವರು ಹೇಳಿದರು.
ಹತ್ಯೆಗೀಡಾದ ಭಯೋತ್ಪಾದಕರು ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್ಇಟಿಯೊಂದಿಗೆ ಸಂಬಂಧ ಹೊಂದಿದ್ದರು ಎಂದು ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಹೇಳಿದ್ದಾರೆ.”(ಭಯೋತ್ಪಾದಕರ) ಗುರುತು ಪತ್ತೆ ಮಾಡಲಾಗುತ್ತಿದೆ. ಎನ್‌ಕೌಂಟರ್ ಸೈಟ್‌ನಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಕುಮಾರ್ ಹೇಳಿದರು.
ಹಿಂದಿನ ದಿನ, ಕುಪ್ವಾರದ ಪೊಲೀಸರು ಜುಮಗುಂಡ್ ಗ್ರಾಮದಲ್ಲಿ ಒಳನುಸುಳುವಿಕೆಯ ಬಗ್ಗೆ ನಿರ್ದಿಷ್ಟ ಮಾಹಿತಿ ಪಡೆದರು. ಒಳನುಸುಳುತ್ತಿದ್ದ ಭಯೋತ್ಪಾದಕರನ್ನು ಸೇನೆ ಮತ್ತು ಪೊಲೀಸರು ತಡೆದಾಗ ಎನ್‌ಕೌಂಟರ್ ಆರಂಭವಾಯಿತು.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ: ಮತದಾನಕ್ಕೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement