ನಾಯಿಗೆ ವಾಕಿಂಗ್‌ ಮಾಡಿಸಲು ದೆಹಲಿ ಸ್ಟೇಡಿಯಂ ಖಾಲಿ ಮಾಡಿಸಿದ ಐಎಎಸ್ ಅಧಿಕಾರಿ ಲಡಾಖ್‌ಗೆ, ಪತ್ನಿ ಅರುಣಾಚಲಕ್ಕೆ ವರ್ಗಾವಣೆ..!

ನವದೆಹಲಿ: ತನ್ನ ನಾಯಿಯನ್ನು ವಾಕ್‌ ಮಾಡಿಸಲು (ನಡೆದಾಡಿಸಲು) ದೆಹಲಿಯ ಕ್ರೀಡಾಂಗಣವನ್ನು ತೆರವುಗೊಳಿಸಿದ ಅಧಿಕಾರಿ ಸಂಜೀವ್ ಖಿರ್ವಾರ್ ಕ್ರಮಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಅವರನ್ನು ಲಡಾಖ್‌ಗೆ ವರ್ಗಾಯಿಸಲಾಗಿದೆ. ಅವರ ಪತ್ನಿ ರಿಂಕು ದುಗ್ಗಾ ಅವರನ್ನು ಅರುಣಾಚಲ ಪ್ರದೇಶಕ್ಕೆ ವರ್ಗಾವಣೆ ಮಾಡಲಾಗಿದೆ.
ದೆಹಲಿಯ ತ್ಯಾಗರಾಜ್ ಸ್ಟೇಡಿಯಂನಲ್ಲಿ ಭಾರತೀಯ ಆಡಳಿತ ಸೇವೆಗಳ ಅಧಿಕಾರಿಯು ತನ್ನ ನಾಯಿ ವಾಕ್ ಮಾಡುವುದಕ್ಕಾಗಿ ಸ್ಟೇಡಿಯಂ ಖಾಲಿ ಮಾಡಿಸಿದ ಮಾಧ್ಯಮ ವರದಿಗಳ ನಂತರ ಗೃಹ ವ್ಯವಹಾರಗಳ ಸಚಿವಾಲಯದಿಂದ (MHA) ಆದೇಶ ಬಂದಿದೆ.

ಸಂಜೀವ್ ಖಿರ್ವಾರ್ ಮತ್ತು ಅವರ ಪತ್ನಿ ರಿಂಕು ದುಗ್ಗಾ ಅವರು ತ್ಯಾಗರಾಜ್ ಕ್ರೀಡಾಂಗಣದಲ್ಲಿ ಸೌಲಭ್ಯಗಳನ್ನು ದುರುಪಯೋಗಪಡಿಸಿಕೊಂಡ ಬಗ್ಗೆ ಮಾಧ್ಯಮ ವರದಿಗಳ ಕುರಿತು ಕುರಿತು ಗೃಹ ವ್ಯವಹಾರಗಳ ಸಚಿವಾಲಯವು ದೆಹಲಿಯ ಮುಖ್ಯ ಕಾರ್ಯದರ್ಶಿಯಿಂದ ವರದಿಯನ್ನು ಕೇಳಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.
ಮುಖ್ಯ ಕಾರ್ಯದರ್ಶಿಯವರು ಸಂಜೆಯ ನಂತರ ಗೃಹ ವ್ಯವಹಾರಗಳ ಸಚಿವಾಲಯಕ್ಕೆ ಈ ಬಗ್ಗೆ ವರದಿ ಸಲ್ಲಿಸಿದ್ದಾರೆ.
ಈ ಮಧ್ಯೆ, ಸಂಜೀವ್ ಖಿರ್ವಾರ್ ಅವರನ್ನು ಲಡಾಖ್‌ಗೆ ಮತ್ತು ರಿಂಕು ಧುಗ್ಗಾ ಅವರನ್ನು ಅರುಣಾಚಲ ಪ್ರದೇಶಕ್ಕೆ ಎಂಎಚ್‌ಎ ವರ್ಗಾಯಿಸಿದೆ. ವರದಿಯ ಆಧಾರದ ಮೇಲೆ ಅಗತ್ಯ ಕ್ರಮವನ್ನು ಪ್ರಾರಂಭಿಸಲಾಗುವುದು” ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಆಮಿಷ...ಮದುವೆ.. ನಂತರ ಚಿನ್ನಾಭರಣ-ಹಣದೊಂದಿಗೆ ಪಲಾಯನ...: ಕೊನೆಗೂ ಬಲೆಗೆಬಿದ್ದ 25 ಪುರುಷರನ್ನು ವಂಚಿಸಿದ್ದ 'ಲೂಟಿಕೋರ ವಧು'...!

ಕ್ರೀಡಾಂಗಣದಲ್ಲಿ ತರಬೇತಿ ಪಡೆಯುವ ಕ್ರೀಡಾಪಟುಗಳು ಮತ್ತು ತರಬೇತುದಾರರು ಎಂದಿಗಿಂತಲೂ ಮುಂಚಿತವಾಗಿ, ಸಂಜೆ 7 ಗಂಟೆಗೆ ತರಬೇತಿಯನ್ನು ಪೂರ್ಣಗೊಳಿಸಲು ಸೂಚಿಸಲಾಯಿತು.
ಆದರೆ, ಕ್ರೀಡಾಂಗಣದ ಆಡಳಿತಾಧಿಕಾರಿ ಅಜಿತ್ ಚೌಧರಿ ಅವರು ಅಥ್ಲೀಟ್‌ಗಳ ಆರೋಪವನ್ನು ಅಲ್ಲಗಳೆದಿದ್ದಾರೆ. ಅಥ್ಲೀಟ್‌ಗಳಿಗೆ ತರಬೇತಿ ನೀಡಲು ಅಧಿಕೃತ ಸಮಯ ಸಂಜೆ 7 ಗಂಟೆಯವರೆಗೆ ಇದ್ದು, ನಂತರ ತರಬೇತುದಾರರು ಮತ್ತು ಕ್ರೀಡಾಪಟುಗಳು ತೆರಳುತ್ತಾರೆ ಎಂದು ಅವರು ಹೇಳಿದ್ದಾರೆ.
ಐಎಎಸ್ ಅಧಿಕಾರಿಯ ಕ್ರಮಗಳ ಬಗ್ಗೆ ಅಂತರ್ಜಾಲದಲ್ಲಿ ಭಾರೀ ಆಕ್ರೋಶದ ನಂತರ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಷ್ಟ್ರ ರಾಜಧಾನಿಯ ಎಲ್ಲಾ ಕ್ರೀಡಾಂಗಣಗಳನ್ನು ಆಟಗಾರರು ಮತ್ತು ಅವರ ತರಬೇತುದಾರರಿಗೆ ರಾತ್ರಿ 10 ರವರೆಗೆ ತೆರೆದಿರಲು ಆದೇಶಿಸಿದ್ದಾರೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement