ನಾಳೆ ಸಚಿವಾಲಯ ಬಂದ್‌ಗೆ ಕರೆ ನೀಡಿದ ನೌಕರರು; ಪ್ರತಿಭಟನೆ ಕಾನೂನುಬಾಹಿರ ಎಂದ ಸರ್ಕಾರ

ಬೆಂಗಳೂರು: ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಸಚಿವಾಲಯ ನೌಕರರ ಸಂಘ ಶುಕ್ರುವಾರ ಸಚಿವಾಲಯ ಬಂದ್ ಕರೆ ನೀಡಿದ್ದು, ಇದೇವೇಳೆ ಸಿಬ್ಬಂದಿ ಪ್ರತಿಭಟನೆ ಕಾನೂನು ಬಾಹಿರ ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.
ಸರ್ಕಾರದ ಎಚ್ಚರಿಕೆಗೆ ಬಗ್ಗದ ಸಚಿವಾಲಯದ ನೌಕರರ ಸಂಘ, ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಂಘ ಹಲವು ಬಾರಿ ಮನವಿಗಳನ್ನು ಸಲ್ಲಿಸಿದೆ. ಆದರೆ ಯಾವ ಮನವಿಯನ್ನು ಪರಿಗಣಿಸಿ, ಸಭೆ ಕರೆದು ಚರ್ಚಿಸಲಿಲ್ಲ. ಆದ್ದರಿಂದ ಸಚಿವಾಲಯ ಸಂಘ ನೀಡಿರುವ ಕರೆಯಂತೆ ಸಮಸ್ತ ಸಚಿವಾಲಯ ನೌಕರರು ಬಂದ್ ಯಶಸ್ವಿಗೊಳಿಸಬೇಕು ಎಂದು ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ಪಿ ಗುರುಸ್ವಾಮಿ ಮನವಿ ಮಾಡಿದ್ದಾರೆ

ಆದರೆ ಸರ್ಕಾರ ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಸಂಘದ ಸಿಬ್ಬಂದಿ ಕಚೇರಿಗೆ ಕಡ್ಡಾಯವಾಗಿ ಹಾಜರಾಗತಕ್ಕದ್ದು. ಒಂದು ವೇಳೆ ಸಚಿವಾಲಯದ ಸಿಬ್ಬಂದಿ ಮೇಲಧಿಕಾರಿಗಳ ಪೂರ್ವಾನುಮತಿ ಪಡೆಯದೇ ಕಚೇರಿಗೆ ಗೈರು ಹಾಜರಾದಲ್ಲಿ ಅದನ್ನು ಲೆಕ್ಕಕ್ಕಿಲ್ಲದ ಅವಧಿ (Dies-non) ಎಂದು ಪರಿಗಣಿಸಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಕಚೇರಿಗೆ ಹಾಜರಾಗಲು ಇಚ್ಛೆಪಡುವ ಸಿಬ್ಬಂದಿಗೆ ಅಡ್ಡಿ ಪಡಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮವಹಿಸಲಾಗುವುದು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement