ಬೆಂಗಳೂರಲ್ಲಿ ದೇವೇಗೌಡರನ್ನು ಭೇಟಿ ಮಾಡಿದ ತೆಲಂಗಾಣ ಸಿಎಂ ಕೆಸಿಆರ್: ತೃತೀಯ ರಂಗ ಬಲವರ್ಧನೆ ಕುರಿತು ಮಹತ್ವದ ಚರ್ಚೆ

ಬೆಂಗಳೂರು: ತೆಲಂಗಾಣ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ ರಾವ್ ಅವರು ಇಂದು, ಗುರುವಾರ ಮಾಜಿ ಪ್ರಧಾನಿ, ಹೆಚ್.ಡಿ.ದೇವೇಗೌಡ ಅವರನ್ನು ಪದ್ಮನಾಭನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿರುವುದು ದೇಶದ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಮನೆಗೆ ಆಗಮಿಸಿದ ಚಂದ್ರಶೇಖರ ರಾವ್ ಅವರನ್ನು ಹೂ ಗುಚ್ಛ ನೀಡಿ ಸ್ವಾಗತಿಸಿದರು.

ಬಿಜೆಪಿ ಹಾಗೂ ಕಾಂಗ್ರೆಸ್‌ ಈ ಎರಡು  ರಾಷ್ಟ್ರೀಯ ಪಕ್ಷಗಳಿಗೆ ಪರ್ಯಾಯವಾಗಿ ಪ್ರಾದೇಶಿಕ ಪಕ್ಷಗಳನ್ನು ಒಂದುಗೂಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಚಂದ್ರಶೇಖರರಾವ್ ಅವರು ಎಚ್.ಡಿ. ದೇವೇಗೌಡರನ್ನು ಭೇಟಿ ಮಾಡಿದ್ದಾರೆ.
ಎರಡು ರಾಷ್ಟ್ರೀಯ ಪಕ್ಷಗಳಿಗೆ ಪರ್ಯಾಯವಾಗಿ ಪ್ರಾದೇಶಿಕ ಪಕ್ಷಗಳನ್ನು ಒಂದುಗೂಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಚಂದ್ರಶೇಖರರಾವ್ ಅವರು ಹೆಚ್.ಡಿ. ದೇವೇಗೌಡರನ್ನು ಭೇಟಿ ಮಾಡಿದ್ದಾರೆ. ರಾಷ್ಟ್ರಪತಿ ಚುನಾವಣೆ ಸನಿಹದಲ್ಲೇ ಇರುವುದರಿಂದ ಈ ಭೇಟಿ ರಾಜಕೀಯವಾಗಿ ಮಹತ್ವ ಪಡೆದಿದೆ.

ದೇಶದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ಸೇತರ ಪಕ್ಷಗಳ ಒಗ್ಗೂಡಿಸಲು ಕೆಸಿಆರ್ ಕಸರತ್ತು ನಡೆಸಿದ್ದು,
ದೇಶದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ಸೇತರ ಪಕ್ಷಗಳ ಒಗ್ಗೂಡಿಸಲು ಕೆಸಿಆರ್ ಕಸರತ್ತು ನಡೆಸಿದ್ದು, ದೇಶದಲ್ಲಿ ತೃತೀಯ ರಂಗ ಬಲಪಡಿಸುವ ಬಗ್ಗೆ ಮಹತ್ವದ ಮಾಜಿ ಪ್ರಧಾನಿ ದೇವೇ ಗೌಡ ಅವರ ಜೊತೆಗೆ ಮಾತುಕತೆ ನಡೆಸಿದರು. ತೃ
ಕೆಸಿಆರ್ ಹಾಗೂ ದೇವೇಗೌಡರ ಮಾತುಕತೆ ವೇಳೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಉಪಸ್ಥಿತರಿದ್ದರು. ರಾಷ್ಟ್ರಪತಿ ಆಯ್ಕೆ, ಪ್ರಸಕ್ತ ರಾಜಕೀಯ ವಿದ್ಯಮಾನಗಳ ಮತ್ತು ರಾಷ್ಟ್ರೀಯ ಪಕ್ಷಗಳಿಗೆ ಪರ್ಯಾಯ ಶಕ್ತಿಯಾಗಿ ತೃತೀಯ ರಂಗ ರಚಿಸುವ ಸಂಬಂಧ ಮಹತ್ವದ ಸಮಾಲೋಚನೆ ನಡೆಸಲಾಗಿದೆ.

ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

ಕಳೆದ ಶನಿವಾರ ಉತ್ತರ ಪ್ರದೇಶಕ್ಕೆ ತೆರಳಿ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಭೇಟಿ ಮಾಡಿದ್ದ ಕೆಸಿಆರ್, ಭಾನುವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಭೇಟಿ ಮಾಡಿದ್ದರು.
ಈಗಾಗಲೇ ಡಿಎಂಕೆ, ತೃಣಮೂಲ, ಆರ್‌ಜೆಡಿ, ನಾಯಕರ ಜೊತೆ, ಮಹಾರಾಷ್ಟ್ರ ವಿಕಾಸ ಅಘಾಡಿ ಒಕ್ಕೂಟಗಳ ಜೊತೆ ಚರ್ಚಿಸಿರುವ ಚಂದ್ರಶೇಖರ್ ರಾವ್, ಇಂದು, ಗುರುವಾರ ರಾಜ್ಯದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement