ಇಂಗ್ಲಿಷ್ ಕಲಿಕೆ ಕಷ್ಟವೆಂದು ಆತ್ಮಹತ್ಯೆಗೆ ಯತ್ನಿಸಿದ ಬಾಲಕ

ತುಮಕೂರು: ಇಂಗ್ಲಿಷ್​ ಓದಲು ಕಷ್ಟವಾಗುತ್ತದೆ ಎಂದು 7ನೇ ತರಗತಿ ವಿದ್ಯಾರ್ಥಿಯೊಬ್ಬ ವಿಷ ಕುಡಿದು ಆತ್ಮಹತ್ಯಗೆ ಯತ್ನಿಸಿದ ಘಟನೆ ಘಟನೆ ತುಮಕೂರಿನ ಊರ್ಡಿಗೆರೆಯಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಅಜಯ ಎಂಬ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿದ ಬಾಲಕ, ಸದ್ಯ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಹೇಳಲಾಗಿದೆ.

ಈತ ಊರ್ಡಿಗೆರೆ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಾನೆ. ಇಂಗ್ಲಿಷ್ ಓದಲು ಕಷ್ಟವಾಗುತ್ತದೆ, ಹೀಗಾಗಿ ಶಾಲೆಗೆ ಹೋಗುವುದಿಲ್ಲ ಎಂದು ಹಠ ಮಾಡುತ್ತಿದ್ದ. ಆದರೆ, ಶಾಲೆಗೆ ಹೋಗುವಂತೆ ಪೋಷಕರು ಬುದ್ಧಿ ಮಾತು ಆತನಿಗೆ ಹೇಳಿದ್ದರು. ಆದರೆ, ಶಾಲೆಗೆ ಹೋಗುವುದಿಲ್ಲ ಎಂದು ಮನೆಯಲ್ಲಿದ್ದ ಕ್ರಿಮಿನಾಶಕ ಸೇವಿಸಿ ನಿನ್ನೆ ಬೆಳಗ್ಗೆ 7 ಗಂಟೆ ಸಮಯದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ವಿಷ ಕುಡಿದ ಬಳಿಕ ಅಸ್ವಸ್ಥಗೊಂಡು ಮನೆಯಲ್ಲಿ ಕುಸಿದುಬಿದ್ದಿದ್ದ ಬಾಲಕನನ್ನು ಪಾಲಕರು ಆಸ್ಪತ್ರೆಗೆ ದಾಖಲಿಸಿದ್ದು, ಅಜಯ್​ಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿದ್ಯಾರ್ಥಿ ಅಜಯ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.

ಕೂಲಿ ಕೆಲಸ ಮಾಡುತ್ತಾ ಜೀವನ ನಡೆಸುತ್ತಿರುವ ಸೋಮಶೇಖರ್ ಕುಟುಂಬ ಕೂಲಿ ಕೆಲಸದ ನಿಮಿತ್ತ ಊರ್ಡಿಗೆರೆ ಗ್ರಾಮಕ್ಕೆ ವಲಸೆ ಬಂದಿದೆ. ಕೋತಿತೋಪು ಸರ್ಕಾರಿ ಶಾಲೆಯಲ್ಲಿ 6ನೇ ತರಗತಿವರೆಗೂ ವಿದ್ಯಾಭ್ಯಾಸ ಮಾಡಿದ್ದ ಬಾಲಕ. 7ನೇ ತರಗತಿಗೆ ಊರ್ಡಿಗೆರೆಯಲ್ಲಿ ಸೇರಿಕೊಂಡಿದ್ದ.
ಒಂದೆರಡು ದಿನ ಶಾಲೆಗೆ ಹೋಗಿದ್ದ ಬಾಲಕ, ಬಳಿಕ ಶಾಲೆಗೆ ಹೋಗುವುದಿಲ್ಲ ಎಂದು ಹಠ ಮಾಡಿದ್ದ. ಶಾಲೆಗೆ ಹೋಗುವಂತೆ ಪೋಷಕರು ಬಾಲಕನಿಗೆ ಬುದ್ಧಿ ಹೇಳಿದ್ದರು. ಇದರಿಂದ ಬೇಸರಗೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಬಾಲಕನಿಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಪ್ರದೇಶಗಳೂ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಮುನ್ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement