ಐತಿಹಾಸಿಕ ಚಿತ್ರದುರ್ಗ ಮುರುಘಾ ಮಠಕ್ಕೆ ನೂತನ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಸ್ವಾಮೀಜಿ ಆಯ್ಕೆ

posted in: ರಾಜ್ಯ | 0

ಚಿತ್ರದುರ್ಗ: ಐತಿಹಾಸಿಕ ಹಿನ್ನೆಲೆಯ ಚಿತ್ರದುರ್ಗ ಮುರುಘಾ ಮಠಕ್ಕೆ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಸ್ವಾಮೀಜಿ ಆಯ್ಕೆಯಾಗಿದ್ದಾರೆ. ಚಿತ್ರದುರ್ಗ ಮುರುಘಾ ಮಠದ ಪೀಠಾಧ್ಯಕ್ಷರಾದ ಡಾ. ಶಿವಮೂರ್ತಿ ಮುರುಘಾ ಶರಣರು ಶ್ರೀಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಸ್ವಾಮೀಜಿ ಅವರ ಹೆಸರನ್ನು ಘೋಷಣೆ ಮಾಡಿದ್ದಾರೆ.
ಚಿತ್ರದುರ್ಗ ನಗರದ ಮುರುಘಾ ಮಠದ ಶಿರಸಂಗಿ ಮಹಾಲಿಂಗ ಸ್ವಾಮಿ ಸಭಾಂಗಣದಲ್ಲಿ ಶುಕ್ರವಾರ ಭಕ್ತರ ಸಮ್ಮುಖದಲ್ಲಿ ಶ್ರೀಮಠದ ಉತ್ತರಾಧಿಕಾರಿಯ ಹೆಸರನ್ನು ಡಾ.ಮುರುಘಾ ಶರಣರು ಘೋಷಿಸಿದರು. ನೂತನ ಉತ್ತರಾಧಿಕಾರಿ ಬಸವಾದಿತ್ಯ ಸ್ವಾಮೀಜಿ ಅವರ ಹಣೆಗೆ ಮುರುಘಾ ಶ್ರೀಗಳು ವಿಭೂತಿ ಇಟ್ಟು, ರುದ್ರಾಕ್ಷಿ ಮಾಲೆ ಹಾಕಿ ಹೆಸರು ಘೋಷಿಸಿದ ನಂತರತೆ ಭಕ್ತರು ನೂತನ ಉತ್ತರಾಧಿಕಾರಿಗೆ ಹೂವಿನ ಮಳೆ ಸುರಿಸಿದರು.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುರುಘಾ ಶ್ರೀಗಳು, ಇದು ಆತುರದ ನಿರ್ಧಾರವಲ್ಲ. ಒಂದು ವರ್ಷದ ಹಿಂದೆಯೇ ಉತ್ತರಾಧಿಕಾರಿ ಘೋಷಣೆ ಬಗ್ಗೆ ನಿರ್ಧರಿಸಲಾಗಿತ್ತು. ಈಗಿನ ಬಸವಾದಿತ್ಯ ಸ್ವಾಮೀಜಿ ಅವರ ಪೂರ್ವಶ್ರಮದ ತಂದೆ-ತಾಯಿ ಚಿತ್ರದುರ್ಗ ಹುಲ್ಲೂರು ಗ್ರಾಮದ ಶಿವಮೂರ್ತಯ್ಯ ಮತ್ತು ಚಂದ್ರಕಲಾ. ಚಿತ್ರದುರ್ಗ ನಗರದ ಎಸ್​ಜೆಎಂ ಕಾಲೇಜಿನಲ್ಲಿ ಬಸವಾದಿತ್ಯ ಸ್ವಾಮಿ ವ್ಯಾಸಂಗ ಮಾಡುತ್ತಿದ್ದರು ಎಂದರು.

ಓದಿರಿ :-   ಕುಮಟಾ: ಮೂರು ದಿನಗಳ ಕಾರ್ಯಾಚರಣೆ ನಂತರ ಸಮುದ್ರ ಪಾಲಾದ ಮತ್ತಿಬ್ಬರ ಶವ ಪತ್ತೆ

ಶ್ರೀ ಬಸವಾದಿತ್ಯ ಸ್ವಾಮೀಜಿ ಮಾತನಾಡಿ, ನನಗೆ ಚಿಕ್ಕ ವಯಸ್ಸಿನಲ್ಲೇ ಮಠದ ಜವಾಬ್ದಾರಿ ನೀಡಿದ್ದಾರೆ. ಶ್ರೀಮಠವನ್ನು ಮತ್ತಷ್ಟು ಅಭಿವೃದ್ಧಿಯತ್ತ ಕೊಂಡೊಯ್ಯುಲಾಗುವುದು ಎಂದು ಹೇಳಿದರು.
ಅವರು ಮೊದಲಿನಿಂದಲೂ ಆಧ್ಯಾತ್ಮದಲ್ಲಿ ಆಸಕ್ತಿ ಹೊಂದಿದ್ದರು. ಬಸವ ಕೇಂದ್ರದ ಒಡನಾಡಿಯಾಗಿದ್ದು, ಅವರ ದೊಡ್ಡಮ್ಮನೊಂದಿಗೆ ಮುರುಘಾ ಮಠದ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದರು. ಇವರ ನಡೆನುಡಿ ಗಮನಿಸಿದ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಮುರುಘಾ ಶರಣರು ಅವರಿಗೆ ಗುರುಕುಲದಲ್ಲಿ ವಿದ್ಯಾಭ್ಯಾಸ ಮಾಡಿಸಿದ್ದರು. ಬಸವಾದಿತ್ಯ ಅವರು ಚಿತ್ರದುರ್ಗದ ಎಸ್.ಜೆ.ಎಂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಾರೆ.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 2

advertisement

ನಿಮ್ಮ ಕಾಮೆಂಟ್ ಬರೆಯಿರಿ