ತನ್ನ ಐಷಾರಾಮಿ ಕಾರನ್ನು ತಾನೇ ಕಾವೇರಿ ನದಿಯಲ್ಲಿ ಮುಳುಗಿಸಿದ ವ್ಯಕ್ತಿ…!

posted in: ರಾಜ್ಯ | 0

ಶ್ರೀರಂಗಪಟ್ಟಣ: ವ್ಯಕ್ತಿಯೊಬ್ಬ ತನ್ನದೇ ದುಬಾರಿ ಬೆಲೆಯ ಐಷಾರಾಮಿ ಬಿಎಂಡಬ್ಲ್ಯು ಕಾರನ್ನು ಕಾವೇರಿ ನದಿಯಲ್ಲಿ ಮುಳುಗಿಸಿದ ಘಟನೆ ಬುಧವಾರ ರಾತ್ರಿ ನಡೆದ ವರದಿಯಾಗಿದೆ. ಸ್ಥಳೀಯರು ಮಾಹಿತಿ ನೀಡಿದ ಬಳಿಕ ಮರುದಿನ ಪೊಲೀಸರು ಹರಸಾಹಸಪಟ್ಟು ಕಾರನ್ನು ನೀರಿನಿಂದ ಹೊರ ತೆಗೆದಿದ್ದಾರೆ.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಕಾರಿನ ಮಾಲಕನನ್ನು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​ ನಿವಾಸಿ ರೂಪೇಶ್ ಎಂದು ಗುರುತಿಸಲಾಗಿದ್ದು, ಬುಧವಾರ ರಾತ್ರಿ ಕಾರು ಚಲಾಯಿಸಿಕೊಂಡು ಬಂದ ರೂಪೇಶ್‌ ಗಂಜಾಂನ ನಿಮಿಷಾಂಬ-ಕರಿಘಟ್ಟ ಸೇತುವೆ ಕೆಳಭಾಗದ ಕಾವೇರಿ ನದಿಯ ನೀರಲ್ಲಿ ಐಷಾರಾಮಿ ಬಿಎಂಡಬ್ಲ್ಯು ಕಾರನ್ನು ಏಕಾಏಕಿ ಚಲಾಯಿಸಿಕೊಂಡು ಹೋಗಿ ಮುಳುಗಿಸಿದ್ದಾರೆ ಎಂದು ಹೇಳಲಾಗಿದೆ. ಇದನ್ನು ಸ್ಥಳೀಯರು ನೋಡಿದ್ದು, ಮರುದಿನ ಪೊಲೀಸರಿಗೆ ದೂರು ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಹರಸಾಹಸಪಟ್ಟು ನೀರಿನಿಂದ ಕಾರನ್ನು ತೆಗೆದಿದ್ದಾರೆ.

ಕಾರಿನ ಮಾಲಕ ರೂಪೇಶ್‌ನನ್ನು ವಿಚಾರಿಸಿದಾಗ ಕಾರಿನಲ್ಲಿ ಬೆಂಗಳೂರಿನಿಂದ ಬರುವಾಗ ಅಪರಿಚಿತರು ನನ್ನನ್ನು ಹಿಂಬಾಲಿಸಿಕೊಂಡು ಕೊಲೆ ಮಾಡಲು ಬಂದಿದ್ದು, ಅದಕ್ಕಾಗಿ ನದಿಯೊಳಗೆ ಕಾರುಚಲಾಯಿಸಿದ್ದರಿಂದ ಅದು ಮುಳುಗಿದೆ ಎಂದು ಹೇಳಿದ್ದಾರೆ. ಆದರೆ ನಂತರ ಬೇರೆಯೇ ಹೇಳಿಕೆ ನೀಡಿದ್ದರಿಂದ ಗೊಂದಲಕ್ಕೊಳಗಾದ ಪೊಲೀಸರು ಶ್ರೀರಂಗಪಟ್ಟಣಕ್ಕೆ ರೂಪೇಶ್‌ನ ಸಂಬಂಧಿಕರನ್ನು ಕರೆಸಿ ವಿಚಾರಿಸಿದ್ದಾರೆ. ಈ ವೇಳೆ ಅನಾರೋಗ್ಯದಿಂದ ಇತ್ತೀಚೆಗೆ ತಾಯಿ ನಿಧನ ಹೊಂದಿದ ನಂತರ ಬಳಿಕ ರೂಪೇಶ ಮಾನಸಿಕ ಖಿನ್ನತೆಗೆ ಒಳಗಾಗಿದ್ದು ,ಈ ರೀತಿಯಾಗಿ ನಡೆದುಕೊಳ್ಳುತ್ತಿದ್ದಾರೆ ೆಂದು ತಿಳಿಸಿದ್ದಾರೆ ಎನ್ನಲಾಗಿದೆ.

ಓದಿರಿ :-   ಕರ್ನಾಟಕದಲ್ಲಿ 1 ಲಕ್ಷ ಎಲೆಕ್ಟ್ರಿಕ್ ವಾಹನಗಳ ನೋಂದಣಿ: ಸಚಿವ ಮುರುಗೇಶ್ ನಿರಾಣಿ

 

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

advertisement

ನಿಮ್ಮ ಕಾಮೆಂಟ್ ಬರೆಯಿರಿ