ಬೆಳಗಾವಿ: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ನಿಪ್ಪಾಣಿಯ ಸ್ಥವನಿಧಿ ಘಾಟ್ ಬಳಿ ಶುಕ್ರವಾರ ಬೆಳಗ್ಗೆ ನಡೆದ ಬಗ್ಗೆ ವರದಿಯಾಗಿದೆ.
advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಮೃತರೆಲ್ಲರೂ ನಿಪ್ಪಾಣಿ ನಗರದವರು ಎಂದು ಪೊಲೀಸರು ಪ್ರಾಥಮಿಕ ತನಿಖೆಯ ನಂತರ ಮಾಹಿತಿ ನೀಡಿದ್ದಾರೆ. ಮೃತರನ್ನು ನಿಪ್ಪಾಣಿಯ ಅದಗೊಂಡ ಬಾಬು ಪಾಟೀಲ (60), ಛಾಯಾ ಅದಗೊಂಡ ಪಾಟೀಲ (55), ಮಹಾರಾಷ್ಟ್ರದ ರಾಧಾ ನಗರದ ಚಂಪಾತಾಯಿ ಮಗದುಮ್ಮ (85) ಮತ್ತು ಮಹೇಶ ದೇವಗೊಂಡ ಪಾಟೀಲ (28) ಎಂದು ಗುರುತಿಸಲಾಗಿದೆ ಎಂದು ನಿಪ್ಪಾಣಿ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ. ಇವರೆಲ್ಲರೂ ಸಂಬಂಧಿಕರ ಮದುವೆಗೆ ಹೋಗುತ್ತಿದ್ದರು. ಸ್ಥಳಕ್ಕೆ ನಿಪ್ಪಾಣಿ ಶಹರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೆಸಿಬಿಯಿಂದ ಕಾರನ್ನು ತೆರವುಗೊಳಿಸಲಾಗಿದೆ. ಪ್ರಕರಣ ದಾಖಲಾಗಿದೆ.
ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
advertisement
ನಿಮ್ಮ ಕಾಮೆಂಟ್ ಬರೆಯಿರಿ