ಬೆಳಗಾವಿ: ಮದುವೆ ಮನೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಎಂಇಎಸ್‌ನವರಿಂದ ಹಲ್ಲೆ

ಬೆಳಗಾವಿ: ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಗೂಂಡಾಗಳು ಪುಂಡಾಟಿಕೆ ಮುಂದುವರೆಸಿದ್ದು ಮದುವೆ ಸಮಾರಂಭದಲ್ಲಿ ಕನ್ನಡ ಹಾಡನ್ನು ಹಾಕಿದ್ದಕ್ಕೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದಾಮಣೆ ಗ್ರಾಮದಲ್ಲಿ ನಡೆದ ಬಗ್ಗೆ ಆರೋಪ ಕೇಳಿಬಂದಿದೆ.

ತಾಲೂಕಿನ ದಾಮಣೆ ಗ್ರಾಮದಲ್ಲಿ ಮದುವೆ ಸಮಾರಂಭದಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ವಧು-ವರ ಸೇರಿ ಕನ್ನಡಿಗ ಯುವಕರ ಮೇಲೆ ಎಂಇಎಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದು, ಘಟನೆಯಲ್ಲಿ ವಧು-ವರ ಸೇರಿ ಐವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಓರ್ವನಿಗೆ ಗಂಭೀರ ಗಾಯವಾಗಿದ್ದು ಸದ್ಯ ಗಂಭೀರವಾಗಿ ಗಾಯಗೊಂಡ ಓರ್ವನಿಗೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಗುರುವಾರ ಬೆಳಗಾವಿ ತಾಲೂಕಿನ ದಾಣಮೆ ಗ್ರಾಮದಲ್ಲಿ ಸೈಬಣ್ಣವರ್ ಅವರ ಮನೆಯಲ್ಲಿ ಮದುವೆ ಸಮಾರಂಭವಿದ್ದ ಹಿನ್ನೆಲೆ ರಾತ್ರಿ ಬ್ಯಾಂಡ್ ಹಚ್ಚಿ ಮೆರವಣಿಗೆ ಮೂಲಕ ವಧು-ವರನನ್ನು ಮನೆಗೆ ಕರೆದೊಯ್ಯುಲಾಗುತ್ತಿತ್ತು. ಈ ವೇಳೆ ಮದುವೆ ಸಮಾವೇಶದಲ್ಲಿ ಕನ್ನಡ ಧ್ವಜ ಹಿಡಿದು ‘ಕರುನಾಡೇ’ ಹಾಡಿಗೆ ಯುವಕರು ಕುಣಿಯುತ್ತಿದ್ದರು. ಆಗ ಎಂಇಎಸ್ ತಂಡವೊಂದು ಆಗಮಿಸಿ ಕನ್ನಡ ಹಾಡನ್ನು ಹಾಕದಂತೆ ಎಚ್ಚರಿಕೆ ನೀಡಿ ಗಲಾಟೆ ಪ್ರಾರಂಭಿಸಿದೆ. ಈ ವೇಳೆ ಮಾತಿಗೆ ಮಾತು ಬೆಳೆದು ವಾಗ್ವಾದ ವಿಕೋಪಕ್ಕೆ ಹೋಗಿ ಎಂಇಎಸ್ ಪುಂಡರು ವಧು-ವರ ಸೇರಿ ಆತನ ಕುಟುಂಬಸ್ಥರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಈ ಕುರಿತು ಬೆಳಗಾವಿ ಗ್ರಾಮೀಣ ಠಾಣೆಗೆ ಕುಟುಂಬಸ್ಥರ ದೂರು ನೀಡಿದ್ದಾರೆ.

ಪ್ರಮುಖ ಸುದ್ದಿ :-   ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement