ವಂದಿತಾ ಶರ್ಮಾ ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿ

posted in: ರಾಜ್ಯ | 0

ಬೆಂಗಳೂರು: ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕಗೊಂಡಿದ್ದಾರೆ.
ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಾಲಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಮೇ 31ರಂದು ನಿವೃತ್ತರಾಗಲಿದ್ದು, ಅವರಿಂದ ತೆರವಾಗುವ ಸ್ಥಾನಕ್ಕೆ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ.

advertisement

ಪಂಜಾಬ್ ಮೂಲದ ವಂದಿತಾ ಶರ್ಮಾ ಅವರು ಕರ್ನಾಟಕದ 39ನೇ ಮುಖ್ಯ ಕಾರ್ಯದರ್ಶಿಯಾಗಲಿದ್ದಾರೆ. ಅಲ್ಲದೆ, ಥೆರೇಸಾ ಭಟ್ಟಾಚಾರ್ಯ (2000), ಮಾಲತಿ ದಾಸ್ (2006) ಮತ್ತು ಕೆ ರತ್ನ ಪ್ರಭಾ (2017) ನಂತರ ಉನ್ನತ ಹುದ್ದೆಯನ್ನು ಅಲಂಕರಿಸಿದ ನಾಲ್ಕನೇ ಮಹಿಳೆಯಾಗಿದ್ದಾರೆ.
ತಮ್ಮ 36 ವರ್ಷಗಳ ವೃತ್ತಿ ಜೀವನದಲ್ಲಿ ವಂದಿತಾ ಹಲವಾರು ಸ್ಥಾನಗಳನ್ನು ಅಲಂಕರಿಸಿದ್ದಾರೆ. ಕಳೆದ ವರ್ಷ, ರಾಜ್ಯದಲ್ಲಿ ಕೋವಿಡ್ -19 ಲಸಿಕೆಯನ್ನು ಮೇಲ್ವಿಚಾರಣೆ ಮಾಡಲು ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಯಿತು. ಅವರು ಕೇಂದ್ರದಲ್ಲಿ ಬಾಹ್ಯಾಕಾಶ ಇಲಾಖೆಯೊಂದಿಗೆ ಕೆಲಸ ಮಾಡಿದರು.
1986ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ವಂದಿತಾ ಶರ್ಮಾ ಈಗ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತಾಗಿದ್ದಾರೆ. ಮುಂದಿನ ವರ್ಷ ನವೆಂಬರ್‌ ವರೆಗೆ ಅಧಿಕಾರದ ಅವಧಿ ಇರಲಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಪರೇಶ್ ಮೇಸ್ತ ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ವಕ್ಫ್ ಜಿಲ್ಲಾ ಸಲಹಾ ಸಮಿತಿ ಉಪಾಧ್ಯಕ್ಷ ಸ್ಥಾನ: ವ್ಯಾಪಕ ಆಕ್ರೋಶದ ಬಳಿಕ ಆದೇಶ ರದ್ದು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement