ವಿಧಾನ ಪರಿಷತ್​ಗೆ ಸವದಿ, ನಾರಾಯಣಸ್ವಾಮಿ ಸೇರಿ 7 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್​ನ 7 ಸ್ಥಾನಗಳಿಗೆ ಮತದಾನ ನಡೆಯದೇ ಅವಿರೋಧವಾಗಿ ಆಯ್ಕೆ ನಡೆದಿದೆ.
ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್​ಗೆ ಆಯ್ಕೆಯಾಗುವ 7 ಸ್ಥಾನಗಳಿಗೆ ಜೂನ್​ 6ರಂದು ಮತದಾನ ನಡೆಯಬೇಕಿತ್ತು.
ಆದರೆ, ವಿಧಾನಸಭೆ ಹಾಗೂ ಪಕ್ಷವಾರು ಬಲಾಬಲ ಆಧಾರದಲ್ಲಿ ಏಳು ಅಭ್ಯರ್ಥಿಗಳು ಮಾತ್ರ ಕಣದಲ್ಲಿದ್ದರು. ಮೂರು ಪಕ್ಷಗಳೂ ಹೆಚ್ಚುವರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ.

ಮೇ 24ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು, ಮೇ 25ರಂದು ಪರಿಶೀಲನೆ ಹಾಗೂ ಮೇ 27 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿತ್ತು. ಪರಿಶೀಲನೆ ವೇಳೆ ಸಲ್ಲಿಕೆಯಾದವರ ನಾಮಪತ್ರಗಳು ಸಿಂಧುವಾಗಿದ್ದವು. ಈ ಹಿನ್ನೆಲೆಯಲ್ಲಿ ಹೀಗಾಗಿ 7 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ರಾಜ್ಯ ವಿಧಾನಸಭೆಯ ಕಾರ್ಯದರ್ಶಿಯೂ ಆದ ಚುನಾವಣಾಧಿಕಾರಿ ವಿಶಾಲಾಕ್ಷಿ ಘೋಷಿಸಿದ್ದಾರೆ.
ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸಿದ್ದ ಸವದಿ ಲಕ್ಷ್ಮಣ, ಟಿ.ನಾರಾಯಣಸ್ವಾಮಿ, ಹೇಮಲತಾ ನಾಯಕ ಹಾಗೂ ಎಸ್​.ಕೇಶವ ಪ್ರಸಾದ, ಕಾಂಗ್ರೆಸ್​ನಿಂದ ಕೆ.ಅಬ್ದುಲ್​ ಜಬ್ಬಾರ್​ ಹಾಗೂ ಎಂ​.ನಾಗರಾಜು ಹಾಗೂ ಜೆಡಿಎಸ್​ನಿಂದ ಶರವಣ ಅವರು ಅವಿರೋಧವಾಗಿ ಆಯ್ಕೆಯಾದವರಾಗಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement