ಉದ್ಯಮಿ ಕಟ್ಟೆ ಭೋಜಣ್ಣ ಆತ್ಮಹತ್ಯೆ ಪ್ರಕರಣ: ಸ್ನೇಹಿತನ ಬಂಧನ

posted in: ರಾಜ್ಯ | 0

ಉಡುಪಿ: ಕುಂದಾಪುರದ ಖಾಸಗಿ ಆಸ್ಪತ್ರೆ ಮಾಲಕ ಹಾಗೂ ಉದ್ಯಮಿ ಕಟ್ಟೆ ಭೋಜಣ್ಣ ಆತ್ಮಹತ್ಯೆ ಪ್ರಕರಣದಲ್ಲಿ ಲೆಕ್ಕಪರಿಶೋಧಕ ಮೊಳಹಳ್ಳಿ ಗಣೇಶ ಶೆಟ್ಟಿ ಅವರನ್ನು ಬಂಧಿಸಲಾಗಿದೆ.ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ನಡೆಸಿದ್ದಾರೆ.
ಉಡುಪಿ ಜಿಲ್ಲೆ ಕುಂದಾಪುರದಲ್ಲಿ ನಡೆದ ಪ್ರತಿಷ್ಠಿತ ವ್ಯಕ್ತಿಯೊಬ್ಬರ ಆತ್ಮಹತ್ಯೆ ಪ್ರಕರಣದಲ್ಲಿ ಗೆಳೆಯನಿಂದ ಮೋಸಕ್ಕೊಳಗಾದ ಉದ್ಯಮಿ ಕಟ್ಟೆ ಭೋಜಣ್ಣ, ಗೆಳೆಯನ ಮನೆಯ ಮುಂದೆ ಹೋಗಿ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ, ಈಗ ಮಿತ್ರ ಮೊಳಹಳ್ಳಿ ಗಣೇಶ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ.

advertisement

ಮೊಳಹಳ್ಳಿ ಗಣೇಶ ಶೆಟ್ಟಿ 2012ರ ಮಾರ್ಚ್ 31ರಂದು ಕಟ್ಟೆ ಭೋಜಣ್ಣನವರಿಂದ 3.34 ಕೋಟಿ ರೂಪಾಯಿ ಹಣ ಹಾಗೂ 5 ಕೆಜಿ ಚಿನ್ನ ಪಡೆದುಕೊಂಡಿದ್ದರು. ಗೋಲ್ಡ್ ಸ್ಕೀಂ ನಲ್ಲಿ ಹಣ ಹೂಡಿಕೆ ಮಾಡಿ ಲಾಭಾಂಶ ಕೊಡುವುದಾಗಿ ಹೇಳಿದ್ದರು. ಅಸಲು ಬಡ್ಡಿ ಎಲ್ಲವೂ ಸೇರಿ 9 ಕೋಟಿ ರೂಪಾಯಿ ಸಂದಾಯವಾಗಬೇಕಿತ್ತು ಎಂದು ಹೇಳಲಾಗಿದೆ. ಈ ಹಣ ಸಿಗದ ಕಾರಣ ತನ್ನ ಸ್ವಂತ ರಿವಾಲ್ವರ್ ತೆಗೆದುಕೊಂಡು ಹೋಗಿ ಗೆಳೆಯನ ಮನೆ ಮುಂದೆ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಬಂಧಿತ ಗಣೇಶ್ ಶೆಟ್ಟಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮತ್ತೋರ್ವ ಆರೋಪಿ ಇಸ್ಮಾಯಿಲ್ ಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಓದಿರಿ :-   ಧಾರವಾಡ : 2021ನೇ ಸಾಲಿನ ರಾಷ್ಟ್ರೀಯ ಯುವ ಐಕಾನ್ ಪ್ರಶಸ್ತಿಗೆ ಕರ್ನಾಟಕ ವಿವಿಯ ಸಂಜಯಕುಮಾರ ಬಿರಾದಾರ ಆಯ್ಕೆ

 

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement