ಹುಬ್ಬಳ್ಳಿ: ಎಸ್‌ಡಿಪಿಐ ಸಂಘಟನೆಯ ಹಿಂದೆ ಕಾಂಗ್ರೆಸ್ ನಾಯಕರ ಬೆಂಬಲವಿದ್ದು, ಈ ಸಂಘಟನೆ ಕಾಂಗ್ರೆಸ್ ಬೆಳೆಸಿದ ಕೂಸು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ಶನಿವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳನ್ನು ಕಾಂಗ್ರೆಸ್, ಎಡಪಕ್ಷದವರು ಬೆಳೆಸಿದ್ದಾರೆ. ಈ ಸಂಘಟನೆಗಳಿಗೆ ಕಾಂಗ್ರೆಸ್ ಕುಮ್ಮಕ್ಕು ಇದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಈ ಸಂಘಟನೆಗಳ ಮೇಲಿನ ಪ್ರಕರಣಗಳನ್ನು ವಜಾ ಮಾಡಿದ್ದರು ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಆರ್‌ಎಸ್‌ಎಸ್ ಮೂಲ ಪ್ರಶ್ನಿಸಿರುವ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಆರ್‌ಎಸ್‌ಎಸ್ ಮೂಲ, ಬಿಜೆಪಿ ಮೂಲವನ್ನು ಕೇಳುವ ಸಿದ್ದರಾಮಯ್ಯನವರ ಮೂಲವನ್ನೇ ಜನ ಕಿತ್ತುಕೊಂಡಿದ್ದಾರೆ ಎಂದು ಲೇವಡಿ ಮಾಡಿದರು.
ನಿಮ್ಮ ಕಾಮೆಂಟ್ ಬರೆಯಿರಿ