ಮಂಗಳೂರು ವಿವಿ ಕಾಲೇಜ್: ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ತರಗತಿ ಪ್ರವೇಶ ನಿರಾಕರಣೆ

posted in: ರಾಜ್ಯ | 0

ಮಂಗಳೂರು: ನಗರದಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಇಂದು, ಶನಿವಾರ ಸಹ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ಕಾಲೇಜಿಗೆ ಬಂದಿದ್ದು, ಅವರನ್ನು ಪ್ರಾಂಶುಪಾಲರು ವಾಪಸ್‌ ಕಳುಹಿಸಿದ್ದಾರೆ.
ಈಗಾಗಲೇ ಹೈಕೋರ್ಟ್ ಆದೇಶದ ಅನ್ವಯ ಶಾಲಾ ಕಾಲೇಜುಗಳಲ್ಲಿ ತರಗತಿಯಲ್ಲಿ ಹಿಜಾಬ್ ನಿಷೇಧಿಸಲಾಗಿದೆ. ಆದರೂ ನಗರದ ಕಳೆದ ಮಂಗಳೂರು ವಿವಿ ಕಾಲೇಜಿನಲ್ಲಿ ಎರಡು ದಿನಗಳಿಂದ ನಡೆಯುತ್ತಿರುವ ಹಿಜಾಬ್ ಗಲಾಟೆ ಮತ್ತೆ ಮುಂದುವರೆದಿದ್ದು, ಆದರೂ ಕಾಲೇಜಿಗೆ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು.
ಆದರೆ ಕಾಲೇಜಿನ ಪ್ರಾಂಶಪಾಲರಾದ ಡಾ. ಅನಸೂಯ ರೈ ಅವರು ವಿದ್ಯಾರ್ಥಿನಿಯರಿಗೆ ತರಗತಿಗೆ ಪ್ರವೇಶ ನಿರಾಕರಿಸಿದ್ದಾರೆ. ಬಳಿಕ ವಿಧ್ಯಾರ್ಥಿನಿಯರು ಕಾಲೇಜು ಗ್ರಂಥಾಲಯಕ್ಕೆ ತೆರಳಿದ್ದಾರೆ. ಆದರೆ ಅಲ್ಲಿ ವಿದ್ಯಾರ್ಥಿನಿಯರನ್ನು ತಡೆದು ಪ್ರಾಂಶುಪಾಲರು ಕೋರ್ಟ್‌ ಆದೇಶದ ಬಗ್ಗೆ ಹೇಳಿದ್ದಾರೆ. ಮನೆಗೆ ಮರಳಿದ್ದಾರೆ ಎಂದು ತಿಳಿದುಬಂದಿದೆ.ಕೊನೆಗೆ ಅವರು ಮನೆಗೆ ಮರಳಿದ್ದಾರೆ ಎಂದು ತಿಳಿದುಬಂದಿದೆ.

advertisement

ನಗರದ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುತ್ತಿದ್ದಾರೆ ಎಂದು ಆರೋಪಿಸಿ ಎರಡು ದಿನಗಳ ಹಿಂದೆ ಕೆಲ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಇದಾದ ಬಳಿಕ ಕಾಲೇಜು ಸಮವಸ್ತ್ರ ವಿಚಾರಕ್ಕೆ ಸಂಬಂಧಿಸಿದಂತೆ ಕಾಲೇಜು ವಿಭಾಗದ ಮುಖ್ಯಸ್ಥರ ಸಭೆಯ ನಿರ್ಣಯದಂತೆ, ವಿದ್ಯಾರ್ಥಿನಿಯರು ಕಾಲೇಜಿಗೆ ಬಂದ ನಂತರ ಮಹಿಳಾ ವಿಶ್ರಾಂತಿ ಕೊಠಡಿಗೆ ತೆರಳಿ ತಮ್ಮ ಶಿರವಸ್ತ್ರವನ್ನು ತೆಗೆಯಬೇಕು, ಕಾಲೇಜಿನ ವಠಾರದಲ್ಲಿ ಸಮವಸ್ತ್ರ ಹೊರತುಪಡಿಸಿ ಬೇರೆ ಯಾವುದೇ ಉಡುಪುಗಳನ್ನು ಧರಿಸಲು ಅನುಮತಿ ಇರುವುದಿಲ್ಲ. ಈ ನಿಯಮವನ್ನು ಉಲ್ಲಂಘಿಸಿದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿತ್ತು. ಅಲ್ಲದೆ ಪ್ರಾಂಶುಪಾಲರು ಕೂಡಾ ಖುದ್ದಾಗಿ ಹೇಳಿಕೆ ನೀಡಿ, ಹಿಜಾಬ್‌ ಧರಿಸಲು ಅವಕಾಶವಿಲ್ಲ ಎಂದು ಹೇಳಿದ್ದರು.
ಆದರೂ ಶನಿವಾರ ಕೆಲ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ಆಗಮಿಸಿದ್ದರು. ಅವರಿಗೆ ಪ್ರಾಂಶುಲಾರು ತಿಳಿಹೇಳಿದರೂ ಪಟ್ಟುಬಿಡದ ಕಾರಣ ಅವರಿಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಹೇಳಲಾಗಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಹೈಕೋರ್ಟ್‌ ಮಹತ್ವದ ತೀರ್ಪು...: ಕರ್ನಾಟಕದ ಎಸಿಬಿಯನ್ನೇ ರದ್ದು ಪಡಿಸಿದ ಹೈಕೋರ್ಟ್, ಎಲ್ಲ ಪ್ರಕರಣಗಳನ್ನೂ ಲೋಕಾಯುಕ್ತಕ್ಕೆ ವರ್ಗಾಯಿಸಿ ಆದೇಶ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

4 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement