ಮದುವೆಗೆ ಹುಡುಗಿ ಸಿಕ್ಕಿಲ್ಲವೆಂದು ಬೇಸತ್ತು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆ..!

posted in: ರಾಜ್ಯ | 0

ಬೆಂಗಳೂರು: ಮದುವೆಯಾಗಲು ಹುಡುಗಿ ಸಿಗದಿರುವುದಕ್ಕೆ ಬೇಸತ್ತು ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನ ಪೀಣ್ಯದಲ್ಲಿ ನಡೆದಿದೆ.
ಅಂಧ್ರದ ಮಡಕಶಿರಾ ಮೂಲದ ನವೀನ್ (31) ಎಂಬ ಯುವಕ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಎಡಗೈ ಸ್ವಾಧೀನ ಇಲ್ಲಿದಿರುವ ಸಮಸ್ಯೆಯಿಂದಲೂ ಯುವಕ ಬಳಲುತ್ತಿದ್ದ ಎಂದು ಎನ್ನಲಾಗಿದೆ.

advertisement

ಗಾರ್ಮೆಂಟ್ಸ್​ ನಲ್ಲಿ ಕ್ವಾಲಿಟಿ ಚೆಕ್ ಮಾಡುವ ಕೆಲಸ ಮಾಡುತ್ತಿದ್ದ ಈ ಯುವಕ ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಬಾಟಲ್ ವೊಂದರಲ್ಲಿ ಪೆಟ್ರೋಲ್ ತಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನವೀನ್ ತಂದೆಯವರೂ ಸಹ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರಿಂದ ಜೀವನದಲ್ಲಿ ನವೀನ್ ಬೇಸತ್ತಿದ್ದ ಎಂದು ಹೇಳಲಾಗಿದೆ.

ಆತ್ಮಹತ್ಯೆಗೆ ಯತ್ನಿಸಿದಾಗ ನವೀನ ಕೂಗಾಡುವುದನ್ನು ಸ್ಥಳೀಯರು ಹಾಗೂ ಕೆಲ ವಿದ್ಯಾರ್ಥಿಗಳು ಕೇಳಿ ಓಡಿದ್ದಾರೆ. ತಕ್ಷಣ ಆತನನ್ನು ESI ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ, ಬೇರೆ ಆಸ್ಪತ್ರೆಗೆ ಸಾಗಿಸುವ ವೇಳೆ ಆಂಬುಲೆನ್ಸ್ ನಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಹೆಸರಘಟ್ಟ ರಸ್ತೆಯಲ್ಲಿರುವ ಸಪ್ತಗಿರಿ ಆಸ್ಪತ್ರೆಯಲ್ಲಿ ನವೀನ್ ಮರಣೋತ್ತರ ಪರೀಕ್ಷೆ ನಡೆದಿದೆ. ಆರ್‌ಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಿರಿ :-   ಧಾರವಾಡ : 2021ನೇ ಸಾಲಿನ ರಾಷ್ಟ್ರೀಯ ಯುವ ಐಕಾನ್ ಪ್ರಶಸ್ತಿಗೆ ಕರ್ನಾಟಕ ವಿವಿಯ ಸಂಜಯಕುಮಾರ ಬಿರಾದಾರ ಆಯ್ಕೆ

 

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement