ಅನಂತನಾಗ್‌ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಅನಂತನಾಗ್‌ (ಜಮ್ಮು): ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನಲ್ಲಿ ಶನಿವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಕೊಲ್ಲಲ್ಪಟ್ಟ ಇಬ್ಬರು ಭಯೋತ್ಪಾದಕರು ನಿಷೇಧಿತ ಭಯೋತ್ಪಾದಕ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ (ಎಚ್‌ಎಂ) ಗೆ ಸಂಬಂಧ ಹೊಂದಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

ಇವರಿಬ್ಬರು ಹಲವಾರು ಭಯೋತ್ಪಾದಕ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆ ಎಂದು ಕಾಶ್ಮೀರದ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ಹೇಳಿದ್ದಾರೆ. ಭಯೋತ್ಪಾದಕರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಹತ್ಯೆಗೀಡಾದ ಇಬ್ಬರನ್ನು ಅನಂತನಾಗ್‌ನ ಇಶ್ಫಾಕ್ ಅಹ್ ಗನಿ ಮತ್ತು ಅವಂತಿಪೋರಾದ ಯವರ್ ಅಯೂಬ್ ದಾರ್ ಎಂದು ಗುರುತಿಸಲಾಗಿದೆ.
ಅನಂತನಾಗ್‌ನ ಬಿಜ್‌ಬೆಹರಾ ಪ್ರದೇಶದ ಶಾದಿಪೋರಾದಲ್ಲಿ ಶನಿವಾರ ಎನ್‌ಕೌಂಟರ್‌ ನಡೆದಿದೆ. ಸದ್ಯ ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಮತ್ತು ಭದ್ರತಾ ಪಡೆಗಳು ಶ್ರಮಿಸುತ್ತಿವೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಕೇಜ್ರಿವಾಲ್ ನಿವಾಸದ ಸಿಸಿಟಿವಿ ಡಿವಿಆರ್ ವಶಕ್ಕೆ ಪಡೆದ ಪೊಲೀಸರು

ನಿಮ್ಮ ಕಾಮೆಂಟ್ ಬರೆಯಿರಿ

advertisement