ಆರ್‌ಎಸ್‌ಎಸ್‌ ಸಂಘಟನೆ ಇಟಲಿ ಮೂಲದ್ದಲ್ಲ: ಸಿದ್ದರಾಮಯ್ಯ ಹೇಳಿಕೆಗೆ ಸಚಿವ ನಾಗೇಶ ತಿರುಗೇಟು

ಕೊಪ್ಪಳ: ದೇಶಭಕ್ತ ಸಂಘಟನೆಯಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್‌)ದ ಮೂಲದ ಇಟಲಿಯಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ನಡೆದ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 70 ವರ್ಷ ಕಾಂಗ್ರೆಸ್ ಆಡಳಿತ ಮಾಡಿತ್ತು. ಸಿದ್ದರಾಮಯ್ಯ 5 ವರ್ಷ ರಾಜ್ಯದ ಆಡಳಿತ ಮಾಡಿದ್ದಾರೆ. ಆಗ ಆರ್‌ಎಸ್‌ಎಸ್‌ ಮೂಲ ತಿಳಿದುಕೊಂಡು ಏನಾದರೂ ಮಾಡಬಹುದಿತ್ತು ಎಂದು ಮಾರ್ಮಿಕವಾಗಿ ಹೇಳಿದರು.

ಹಿಜಾಬ್ ಪ್ರಕರಣದ ಹಿಂದೆ ಕಾಂಗ್ರೆಸ್ ಪಿತೂರಿ ಇದೆ. ಪರೋಕ್ಷವಾಗಿ ಕಾಂಗ್ರೆಸ್ ಹಿಜಾಬ್ ಪರವಿದೆ. ನಾವು ಹಿಜಾಬ್ ಹಿಂದೆ ಇರುವ ಪಿತೂರಿ ನೋಡುತ್ತಿದ್ದೇವೆ‌. ಈ ದೇಶದ ಕಾನೂನು ಉಲ್ಲಂಘನೆ ಮಾಡುವ ಪಿತೂರಿ ನೋಡುತ್ತಿದ್ದೇವೆ‌. ಇವತ್ತಲ್ಲ ನಾಳೆ ಅವರು ಇಡೀ ದೇಶದ ಕಾನೂನು ಉಲ್ಲಂಘನೆ ಮಾಡುತ್ತೇವೆ ಎನ್ನುತ್ತಾರೆ‌. ಕೆಲವು ರಾಜಕೀಯ ಪಕ್ಷಗಳು ವೋಟ್‌ಬ್ಯಾಂಕ್‌ಗೆ ಕೆಲವರನ್ನು ಒಲೈಸುತ್ತಿದ್ದಾರೆ ಎಂದು ಟೀಕಿಸಿದರು.

ಈ ದೇಶದ ಜನರಿಗೆ ಯಾವುದು ನಿಜ, ಯಾವುದು ಸುಳ್ಳು ಎನ್ನುವುದು ಗೊತ್ತಿದೆ. ಈ ಮೊದಲು ಬಸವಣ್ಣ, ಭಗತ್ ಸಿಂಗ್, ನಾರಾಯಣ ಗುರು, ಟಿಪ್ಪು ಸುಲ್ತಾನ್‌ ಅವರ ವಿಚಾರಗಳನ್ನು ಪಠ್ಯದಿಂದ ತಗೆದು ಹಾಕಿದರು ಎಂದು ಸುಳ್ಳು ಹೇಳಿಕೆಗಳನ್ನು ನೀಡಿ ಬೊಬ್ಬೆ ಹೊಡೆದರು. ಕಾಂಗ್ರೆಸ್ ಸುಳ್ಳು ಹೇಳಿ ಹಿಂದೂ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ ಎಂದು ಸಚಿವರು ವಾಗ್ದಾಳಿ ನಡೆಸಿದರು.
ಬ್ರಿಟಿಷರಿಂದ ಅಧಿಕಾರ ವಹಿಸಿಕೊಂಡ ದಿನದಿಂದ ಕಾಂಗ್ರೆಸ್ ಮಾಡಿದ್ದು ಸಮಾಜ ಒಡೆಯುವ ಕೆಲಸವನ್ನೇ. ಹಿಂದಿನ ಸರ್ಕಾರ ಮಕ್ಕಳನ್ನು ಒಡೆಯುವ ಕೆಲಸ ಮಾಡಿತ್ತು ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement