ಲಕ್ನೋ: ಉತ್ತರ ಪ್ರದೇಶ ಸರ್ಕಾರವು ಮಹಿಳಾ ಉದ್ಯೋಗಿಗಳ ಲಿಖಿತ ಒಪ್ಪಿಗೆ ಇಲ್ಲದೆ ಸಂಜೆ 7 ಗಂಟೆಯಿಂದ ಮತ್ತು ಬೆಳಿಗ್ಗೆ 6 ಗಂಟೆಯ ಮೊದಲು ಕೆಲಸ ಮಾಡುವಂತೆ ಒತ್ತಾಯಿಸಬಾರದು ಎಂದು ರಾಜ್ಯದ ಉದ್ಯೋಗದಾತರಿಗೆ ಆದೇಶಿಸಿದೆ. ಅಲ್ಲದೆ, ಸರ್ಕಾರವು ಮಹಿಳೆಯರಿಗೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸುವಂತೆ ಉದ್ಯೋಗದಾತರನ್ನು ಕೇಳಿದೆ

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/ಈ ಕುರಿತು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ ಸರ್ಕಾರ ಆದೇಶ ಪ್ರಕಟಿಸಿದ್ದು, ಮಹಿಳಾ ಉದ್ಯೋಗಿಗಳು ರಾತ್ರಿ ಕೆಲಸ ಮಾಡುತ್ತಿದ್ದರೆ ಅವರಿಗೆ ಉಚಿತ ಸಾರಿಗೆ, ಆಹಾರವನ್ನು ಕಂಪನಿ ಕಡ್ಡಾಯವಾಗಿ ನೀಡಬೇಕೆಂದು ಸರ್ಕಾರ ತನ್ನ ಸುತ್ತೋಲೆಯಲ್ಲಿ ತಿಳಿಸಿದೆ. ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.
ರಾತ್ರಿ ಕರ್ತವ್ಯದ ಸಮಯದಲ್ಲಿ ಮಹಿಳೆಯರಿಗೆ ಆಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಕಂಪನಿ ಅಥವಾ ಸಂಸ್ಥೆ ಮಹಿಳಾ ದೌರ್ಜನ್ಯವನ್ನು ತಡೆಗಟ್ಟಲು ಸಮಿತಿಯನ್ನು ರಚಿಸಬೇಕು.ಕಂಪನಿಗಳಲ್ಲಿ ಮಹಿಳೆಯರಿಗೆ ಸ್ನಾನಗೃಹ ಮತ್ತು ಬಟ್ಟೆಯನ್ನು ಬದಲಾಯಿಸುವ ಕೊಠಡಿ ಇರತಕ್ಕದ್ದು. ಕಚೇರಿಗಳಲ್ಲಿ ಕನಿಷ್ಠ 4 ಮಹಿಳಾ ಸಿಬ್ಬಂದಿ ಇದ್ದಲ್ಲಿ ಮಾತ್ರ ಕೆಲಸ ಮಾಡಬಹುದು.
ಒಂದು ವೇಳೆ ಈ ಆದೇಶವನ್ನು ಪಾಲನೆ ಮಾಡದೇ ಇದ್ದರೆ ಕಾರ್ಮಿಕ ಕಾನೂನು ಉಲ್ಲಂಘನೆ ಎಂದು ಪರಿಗಣಿಸಲಾಗುತ್ತದೆ.
ಯೋಗಿ ಆದಿತ್ಯನಾಥ ಸರ್ಕಾರ ಈ ಹಿಂದೆ ಮಹಿಳಾ ಸಬಲೀಕರಣ ಯೋಜನೆಗೆ 75.50 ಕೋಟಿ ರೂ. ಪ್ರಸ್ತಾಪಿಸಿತ್ತು. ಜಿಲ್ಲಾ ಮಟ್ಟದಲ್ಲಿ ಮಹಿಳೆಯರಿಗಾಗಿ ಸೈಬರ್ ಸಪೋರ್ಟ್ ಡೆಸ್ಕ್‌ಗಳನ್ನು ಸ್ಥಾಪಿಸಲು ಸರ್ಕಾರ ಮುಂದಾಗಿದೆ.
ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ