ಬೆಂಗಳೂರು: ಕಾಂಗ್ರೆಸ್ ನಾಯಕ ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ

ಬೆಂಗಳೂರು: ಆದಾಯ ತೆರಿಗೆ ವಂಚನೆ ಆರೋಪದಡಿ ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಕೆಜಿಎಫ್ ಬಾಬು ನಿವಾಸ ಸೇರಿ 7 ಕಡೆಗಳಲ್ಲಿ ಶನಿವಾರ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಂದು, ಶನಿವಾರ ಬೆಳಗ್ಗೆ 7:30ರ ಸುಮಾರಿಗೆ 4 ಇನೋವಾ ಕಾರಿನಲ್ಲಿ ವಸಂತ ನಗರಕ್ಕೆ ಆಗಮಿಸಿದ ಐಟಿ ಅಧಿಕಾರಿಗಳು ಅಲ್ಲಿಯ ಕೆಜಿಎಫ್ ಬಾಬು ಒಡೆತನದ ರುಕ್ಸಾನ ಪ್ಯಾಲೇಸ್ ಹಾಗೂ ಕಚೇರಿಯ ಮೇಲೂ ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಬೆಂಗಳೂರು ನಗರ ಸ್ಥಳೀಯ ಸಂಸ್ಥೆಯಿಂದ ಪರಿಷತ್‍ಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕೆಜಿಎಫ್ ಬಾಬು ಚುನಾವಣೆ ಸಂದರ್ಭದಲ್ಲಿ 1,741 ಕೋಟಿ ಆಸ್ತಿ ಘೋಷಣೆ ಮಾಡಿಕೊಂಡಿದ್ದರು.
ಕೆಜಿಎಫ್ ಬಾಬುಗೆ ಸೇರಿದ ರುಕ್ಸಾನಾ ಪ್ಯಾಲೇಸ್, ಉಮ್ರಾ ಡೆವಲರ್ಸ್, ಉಮ್ರಾ ರಿಯಲ್ ಎಸ್ಟೇಟ್ ಕಂಪನಿಗಳು ಸೇರಿದಂತೆ ಅಧಿಕಾರಿಕಾರಿಗಳು ಒಟ್ಟು 7 ಕಡೆ ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಕೆಜಿಎಫ್ ಬಾಬು ಸ್ನೇಹಿತರ ಮನೆಯ ಮೇಲೂ ದಾಳಿ ನಡೆಸಿದ್ದಾರೆ. ಕೆಜಿಎಫ್ ಬಾಬುಗೆ ಸೇರಿದ ಮನೆ, ಕಚೇರಿ ಸೇರಿ ಹಲವೆಡೆ ಶೋಧ ಪರಿಶೀಲನೆ ನಡೆದಿದೆ ಎಂದು ಹೇಳಲಾಗಿದೆ.

 

 

ಪ್ರಮುಖ ಸುದ್ದಿ :-   ಪ್ರಧಾನಿ ಬಗ್ಗೆ ವಿವಾದಾತ್ಮಕ ಹೇಳಿಕೆ, ವಿದ್ಯುತ್‌ ಕಡಿತ ಬೆದರಿಕೆ: ಶಾಸಕ ರಾಜು ಕಾಗೆಗೆ ಚುನಾವಣೆ ಆಯೋಗದಿಂದ ನೋಟಿಸ್‌

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement