ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ 64ನೇ ವರ್ಷದ ವಾರ್ಷಿಕ ಚುನಾವಣೆಯ ಫಲಿತಾಂಶ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಪ್ರಕಟವಾಗಿದ್ದು, ಭಾಮಾ ಹರೀಶ ಬಣ ಭರ್ಜರಿ ಜಯಗಳಿಸಿದೆ. ಹಾಗೂ ನೂತನ ಅಧ್ಯಕ್ಷರಾಗಿ ಭಾ ಮಾ ಹರೀಶ ಅವರು ಆಯ್ಕೆಯಾಗಿದ್ದಾರೆ.

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಯಲ್ಲಿ ನಿರ್ಮಾಪಕರಾದ ಭಾಮಾ ಹರೀಶ ಮತ್ತು ಸಾರಾ ಗೋವಿಂದು ಗುಂಪುಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಫಳಿತಾಂಶ ಪ್ರಕಟವಾಗಿದ್ದು, ಭಾಮಾ ಹರೀಶ ಬಣಕ್ಕೆ ಭರ್ಜರಿ ಜಯ ದೊರಕಿದ್ದು, ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ಭಾ ಮಾ ಹರೀಶ ಅವರು ಆಯ್ಕೆಯಾಗಿದ್ದಾರೆ.
ಶನಿವಾರ ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆ ವರೆಗೂ ಮತದಾನ ನಡೆಯಿತು. ಭಾಮಾ ಹರೀಶಮತ್ತು ಸಾರಾ ಗೋವಿಂದು ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿತ್ತು. ಅಂತಿಮವಾಗಿ 410 ಮತಗಳ ಅಂತರದಿಂದ ಭಾಮಾ ಹರೀಶ ಜಯಗಳಿಸಿದ್ದಾರೆ. ಸಾರಾ ಗೋವಿಂದು 371 ಮತ ಗಳಿಸಿದರೆ, ಭಾ ಮಾ ಹರೀಶ್ 781 ಮತ ಪಡೆಯುವ ಮೂಲಕ ಅಧ್ಯಕ್ಷರಾಗ ಆಯ್ಕೆಯಾಗಿದ್ದಾರೆ.
ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ