ನಾಲ್ವರು ಭಾರತೀಯರು ಸೇರಿ 22 ಪ್ರಯಾಣಿಕರಿದ್ದ ನೇಪಾಳದ ವಿಮಾನ ಕಣ್ಮರೆ

ಕಠ್ಮಂಡು(ನೇಪಾಳ): 22 ಪ್ರಯಾಣಿಕರಿದ್ದ ನೇಪಾಳದ ವಿಮಾನವೊಂದು ಸಂಪರ್ಕ ಕಳೆದುಕೊಂಡಿರುವುದಾಗಿ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ಪೋಖರಾದಿಂದ ನೇಪಾಳದ ಜೋಮ್ಸೋಮ್‌‌ಗೆ 22 ಮಂದಿ ಪ್ರಯಾಣಿಕರೊಂದಿಗೆ ಹಾರುತ್ತಿದ್ದ ವಿಮಾನವು ಭಾನುವಾರ ಬೆಳಗ್ಗೆ ಸಂಪರ್ಕ ಕಳೆದುಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ತಾರಾ ಏರ್‌ನ 9 NAET ಅವಳಿ-ಎಂಜಿನ್ ವಿಮಾನವು ಬೆಳಿಗ್ಗೆ 9:55 ಕ್ಕೆ ಹಾರಿದ್ದು, ಸ್ವಲ್ಪ ಸಮಯದ ನಂತರ ರಾಡಾರ್‌ ನಿಂದ ಸಂಪರ್ಕ ಕಳೆದುಕೊಂಡಿತು. ನಾಪತ್ತೆಯಾಗಿರುವ ವಿಮಾನದಲ್ಲಿ ನಾಲ್ವರು ಭಾರತೀಯರು ಹಾಗೂ ಇಬ್ಬರು ವಿದೇಶಿ ಪ್ರಜೆಗಳಿದ್ದು, ಉಳಿದ ಪ್ರಯಾಣಿಕರು ನೇಪಾಳಿ ಪ್ರಜೆಗಳಾಗಿದ್ದಾರೆ ಎಂದು ಹೇಳಲಾಗಿದೆ.
ಕಠ್ಮಂಡುವಿನಿಂದ ಸುಮಾರು 200 ಕಿಮೀ ದೂರದ ಜೊಮ್ಸನ್​​ ನಗರದ ಬಳಿ ಹಾರಾಟ ನಡೆಸುವ ವೇಳೆ ವಿಮಾನ ಸಂಪರ್ಕ ಕಳೆದುಕೊಂಡಿದೆ. ವಿಮಾನವು ಧೌಲಗಿರಿ ಪರ್ವತದತ್ತ ಹಾರಿದ ಬಳಿಕ ಕಣ್ಮರೆಯಾಗಿ ಸಂಪರ್ಕ ಕಡಿತಗೊಂಡಿದೆ ಎಂದು ಜಿಲ್ಲಾಧಿಕಾರಿ ನೇತ್ರಾ ಪ್ರಸಾದ ತಿಳಿಸಿದ್ದಾರೆ. ವಿಮಾನದ ಪತ್ತೆಗೆ ಫೀಸ್ಟೆಲ್ ಹೆಲಿಕಾಪ್ಟರ್ ಕಳುಹಿಸಲಾಗಿದೆ.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ಓದಿರಿ :-   ವಿದ್ಯುತ್ ಬಿಕ್ಕಟ್ಟಿಗೆ ಪಾಕಿಸ್ತಾನ ಹೈರಾಣು: ಈಗ ಮೊಬೈಲ್ ಇಂಟರ್ನೆಟ್ ಸೇವೆ ಸ್ಥಗಿತದ ಬಗ್ಗೆ ಎಚ್ಚರಿಕೆ ನೀಡಿದ ಸರ್ಕಾರ...!
advertisement

ನಿಮ್ಮ ಕಾಮೆಂಟ್ ಬರೆಯಿರಿ