ಮುಂದಿನ ವರ್ಷದಿಂದ ಶಾಲಾ-ಕಾಲೇಜುಗಳಲ್ಲಿ ಯೋಗ ಆರಂಭ

posted in: ರಾಜ್ಯ | 0

ಬೆಂಗಳೂರು: ಮುಂದಿನ ವರ್ಷದಿಂದ ಪ್ರೌಢಶಾಲೆ ಮತ್ತು ಕಾಲೇಜುಗಳಲ್ಲಿ ಯೋಗ ಆರಂಭಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಲಾ-ಕಾಲೇಜುಗಳಲ್ಲಿ ಯೋಗ ಆರಂಭಿಸುವ ಕುರಿತು ಯೋಗ ಪರಿಣಿತರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

advertisement

ರಾಜ್ಯದಲ್ಲಿ ಇತ್ತೀಚೆಗೆ ಮಕ್ಕಳು ಒತ್ತಡದಲ್ಲಿದ್ದಾರೆ. ಅದರಲ್ಲೂ ಕೋವಿಡ್ ನಂತರ ಹೊಸ ರೀತಿಯ ಒತ್ತಡಗಳು ಉಂಟಾಗಿದೆ. ಯಾವುದೇ ಒತ್ತಡವಿಲ್ಲದೆ ಬಾಲ್ಯವನ್ನು ಸಂತೋಷದಿಂದ ಕಳೆಯಬೇಕು. ಯೋಗ ಮಕ್ಕಳ ಆರೋಗ್ಯಕ್ಕೂ ಅನುಕೂಲಕರವಾಗಿದೆ. ಹೀಗಾಗಿಯೋಗ ಆರಂಭಿಸುವ ಬಗ್ಗೆ ಚಿಂತಿಸಲಾಗಿದೆ ಎಂದು ಹೇಳಿದರು.

ಜೂನ್‌ 21, ಯೋಗ ದಿನಾಚರಣೆಯಂದು ಮೈಸೂರಿಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಅವರು ರಾಜ್ಯಕ್ಕೆ ಬರುವುದೇ ವಿಶೇಷ. ಅಂದು ದೊಡ್ಡ ಪ್ರಮಾಣದಲ್ಲಿ ಶಾಲಾಕಾಲೇಜು, ಸಂಘಸಂಸ್ಥೆಗಳಿಂದ ಯೋಗ ಕಾರ್ಯಕ್ರಮ ಆಯೋಜಿಸಲಾಗುವುದು. ರಾಜ್ಯದಲ್ಲಿ ಯೋಗದ ಬೆಳವಣಿಗೆಗೆ ಏನೇನು ಕ್ರಮ ಕೈಗೊಂಡಿದ್ದೇವೆ. ಯೋಗಕ್ಕೆ ರಾಜ್ಯ ಏನು ಕೊಡುಗೆ ನೀಡಿದೆ ಎಂಬುದನ್ನು ಪ್ರಧಾನಿ ಸಮ್ಮುಖದಲ್ಲಿ ಆರೋಗ್ಯ ಎಂಬ ಥೀಮ್‍ ಅಡಿ ಅನಾವರಣ ಮಾಡಲಾಗುತ್ತದೆ ಎಂದು ಬೊಮ್ಮಾಯಿ ಹೇಳಿದರು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ನಿಮ್ಮ ಕಾಮೆಂಟ್ ಬರೆಯಿರಿ

advertisement