ರಾಜ್ಯಸಭೆಗೆ ಕರ್ನಾಟಕದಿಂದ ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ನವರಸನಾಯಕ ಜಗ್ಗೇಶ್‌ಗೆ ಟಿಕೆಟ್‌

posted in: ರಾಜ್ಯ | 0

ಬೆಂಗಳೂರು: ಬಿಜೆಪಿಯು ರಾಜ್ಯಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ ಮತ್ತು ಕನ್ನಡದ ನವರಸ ನಾಯಕ ಜಗ್ಗೇಶ್ ಅವರನ್ನು ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡಿದೆ.
ಬಿಜೆಪಿ ಮತ್ತೊಮ್ಮೆ ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ ಅವರನ್ನು ನಿರೀಕ್ಷೆಯಂತೆ ಕಣಕ್ಕಿಳಿಸಿದ್ದು, ಮಾಜಿ ಶಾಸಕ ಜಗ್ಗೇಶ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿಸುವ ಮೂಲಕ ಬಿಜೆಪಿ ಅಚ್ಚರಿ ಮೂಡಿಸಿದೆ. ಏತನ್ಮಧ್ಯೆ, 2ನೇ ಬಾರಿಗೆ ಟಿಕೆಟ್ ಆಕಾಂಕ್ಷಿಯಾಗಿದ್ದ ಹಾಲಿ ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿಗೆ ಟಿಕೆಟ್ ಕೈ ತಪ್ಪಿದೆ. ಸದ್ಯಕ್ಕೆ ಇಬ್ಬರ ಹೆಸರು ಮಾತ್ರ ಘೋಷಣೆ ಮಾಡಿರುವ ಬಿಜೆಪಿ, ಮೂರನೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವುದು ಬಹುತೇಕ ಅನುಮಾನ ಎನ್ನಲಾಗಿದೆ.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಮಹಾರಾಷ್ಟ್ರದಿಂದ ಪಿಯೂಷ್ ಗೋಯಲ್, ಡಾ ಅನಿಲ್ ಸುಖದೇವ್​​ ರಾವ್ ಬೋಂಡೆ ಸ್ಪರ್ಧಿಸಲಿದ್ದಾರೆ. ರಾಜಸ್ಥಾನದಿಂದ ಘನಶ್ಯಾಮ್ ತಿವಾರಿ, ಉತ್ತರಪ್ರದೇಶದಿಂದ ಲಕ್ಷ್ಮೀಕಾಂತ್ ವಾಜಪೇಯಿ ಮತ್ತು ಡಾ. ರಾಧಾ ಮೋಹನ್ ಅಗರವಾಲ್, ಸುಂದರ ಸಿಂಗ್ ನಾಗರ್, ಬಾಬುರಾಮ್ ನಿಶಾದ್, ದರ್ಶನಾ ಸಿಂಗ್, ಸಂಗೀತಾ ಯಾದವ್​ಗೆ ಬಿಜೆಪಿ ಟಿಕೆಟ್ ನೀಡಿದೆ. ಉತ್ತರಾಖಂಡದಿಂದ ಡಾ. ಕಲ್ಪನಾ ಸೈನಿ, ಬಿಹಾರದಿಂದ ಸತೀಶ್ ಚಂದ್ರ ದುಬೆ ಮತ್ತು ಶಂಭು ಶರಣ್ ಪಾಟೀಲ್, ಹರ್ಯಾಣದಿಂದ ಕಷ್ಣ ಲಾಲ್ ಪನ್ವಾರ್ ಅವರಿಗೆ ಅವಕಾಶ ನೀಡಲಾಗಿದೆ.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
ಓದಿರಿ :-   ದತ್ತಪೀಠದಲ್ಲಿ ಪೂಜೆಗೆ ಹಿಂದೂ-ಮುಸ್ಲಿಮರಿಗೆ ಅವಕಾಶ: ಸಂಪುಟ ಉಪಸಮಿತಿ ವರದಿ ಶಿಫಾರಸಿಗೆ ಸಂಪುಟ ಸಭೆ ಒಪ್ಪಿಗೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ