ಬೆಂಗಳೂರು: ಮುಖ್ಯಮಂತ್ರಿ ಚಂದ್ರು ಇಂದು, ಭಾನುವಾರ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ಅಧಿಕೃತವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ. ಶಿವಕುಮಾರ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.
ಹಿರಿಯ ಮುಖಂಡ ಮುಖ್ಯಮಂತ್ರಿ ಚಂದ್ರು ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಆದರೆ ನಿರೀಕ್ಷೆಯಂತೆ ಇವರಿಗೆ ರಾಜ್ಯಸಭೆ ಟಿಕೆಟ್ ಸಿಕ್ಕಿರಲಿಲ್ಲ. ಈ ಬೆಳವಣಿಗೆಯ ನಂತರ ಅವರು ಈಗ ವೈಯಕ್ತಿಕ ಕಾರಣಗಳನ್ನು ನೀಡಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಿದ್ದೇನೆ. ಸಾಂಸ್ಕೃತಿಕ ಘಟಕದ ಅಧ್ಯಕ್ಷನಾಗಿ ಜವಾಬ್ದಾರಿಯನ್ನು ನಿರ್ವಹಿಸಿದ್ದೇನೆ. ಆದರೂ ಪಕ್ಷ ಗುರುತಿಸಿರಲಿಲ್ಲ ಎಂದು ರಾಜೀನಾಮೆ ನೀಡುವ ಮೂಲಕ ಪರೋಕ್ಷ ಅಸಮಾಧಾನ ಹೊರಹಾಕಿದ್ದಾರೆ. ಕಾಂಗ್ರೆಸ್ ನಾಯಕರ ವಿರುದ್ಧ ಮುಖ್ಯಮಂತ್ರಿ ಚಂದ್ರು ಬೇಸರ ವ್ಯಕ್ತಪಡಿಸಿದ್ದಾರೆ.
ಜನಸೇವೆ ಮಾಡುವ ನಿಟ್ಟಿನಲ್ಲಿ ದೇಶದಲ್ಲೇ ಸುದೀರ್ಘ ಇತಿಹಾಸವಿರುವ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೆ. ಪಕ್ಷದಲ್ಲಿದ್ದು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಇಲ್ಲಿವರೆಗೂ ನನಗೆ ಪಕ್ಷದಲ್ಲಿ ಬೆಂಬಲಿಸಿ, ಪ್ರೀತಿ ನೀಡಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ