ಟೆಂಪೊ ಟ್ರಾವೆಲರ್‌- ಟ್ರಕ್ ಮುಖಾಮುಖಿ ಡಿಕ್ಕಿ: ಅಯೋಧ್ಯೆಗೆ ತೆರಳುತ್ತಿದ್ದ ಕರ್ನಾಟಕದ 7 ಜನರ ದುರ್ಮರಣ

ಲಕ್ನೋ: ಬಹ್ಮೈಚ್ ಹಾಗೂ ಲಖಿಂಪುರ ಹೆದ್ದಾರಿಯಲ್ಲಿ ಪ್ರವಾಸಿ ವಾಹನ ಟ್ರಕ್‍ಗೆ ಡಿಕ್ಕಿ ಹೊಡೆದು ಮೂವರು ಮಹಿಳೆಯರು ಸೇರಿದಂತೆ 7 ಜನ ಮೃತಪಟ್ಟಿದ್ದು, 9 ಮಂದಿ ಗಂಭೀರ ಗಾಯಗೊಂಡ ಘಟನೆ ಉತ್ತರ ಪ್ರದೇಶದಲ್ಲಿ ಭಾನುವಾರ ನಡೆದ ಬಗ್ಗೆ ವರದಿಯಾಗಿದೆ.
9 ಜನರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಯೋಧ್ಯೆಗೆ ಟ್ರಾವೆಲರ್‌ನಲ್ಲಿ ಕರ್ನಾಟಕದ ಬೀದರ್‌ನ 16 ಜನರು ಸಾಗುತ್ತಿದ್ದರು. ಈ ಬಸ್ ಮೋತಿಪುರ್ ಪ್ರದೇಶದ ನಾನಿಹಾ ಮಾರುಕಟ್ಟೆಯಲ್ಲಿ ಎದುರಿನ ಲೇನ್‍ಗೆ ಪ್ರವೇಶಿಸಿದಾಗ ಈ ಘಟನೆ ಸಂಭವಿಸಿದೆ. ಬಹರಾಯಿಚ್ ಕಡೆಯಿಂದ ಬರುತ್ತಿದ್ದ ಟ್ರಾವೆಲರ್ ಮತ್ತು ಲಖಿಂಪುರ ಖಾರಿ ಕಡೆಯಿಂದ ಬರುತಿದ್ದ ಟ್ರಕ್ ನಡುವೆ‌ ಮುಖಾಮುಖಿ‌ ಡಿಕ್ಕಿ ಸಂಭವಿಸಿದೆ. ಬಸ್ ಚಾಲಕ ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವಿಗೀಡಾಗಿದ್ದಾರೆ.

ಅಯೋಧ್ಯೆ ಸೇರಿದಂತೆ ಉತ್ತರ ಪ್ರದೇಶದ ತೀರ್ಥ ಕ್ಷೇತ್ರಗಳಿಗೆ ಇಲ್ಲಿನ ಗುಂಪಾದ ಎರಡು ಕುಟುಂಬಗಳು ಬೆಂಗಳೂರಿನಿಂದ ಪ್ರವಾಸಕ್ಕೆ ತೆರಳಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಮೃತಪಟ್ಟವರೆಲ್ಲರೂ ಬೀದರಿನ ಗುಂಪಾ ಹಾಗೂ ಸುಲ್ತಾನಪುರ್ ಗ್ರಾಮದದವರೆಂದು ಗುರುತಿಸಲಾಗಿದೆ. ಘಟನೆ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದಾನೆ. ಬ್ರಾನಚೀ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ...| ಎಲ್ಲರೆದುರು ಸರ್ಪಕ್ಕೆ ಮುತ್ತಿಕ್ಕಿದ ಭೂಪ...ಆದ್ರೆ ನಂತರ ಆದದ್ದೇ ಬೇರೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement