ಬೆಂಗಳೂರು: ಜೂನ್ 2ರಂದು ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಪ್ರದೇಶಗಳಿಗೆ ಮುಂಗಾರು ಪ್ರವೇಶಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ವಾಡಿಕೆಗಿಂತ ಮೂರು ದಿನ ಮುಂಚಿತವಾಗಿ ಮಾನ್ಸೂನ್ ಮೇ 29 ರಂದು ಕೇರಳವನ್ನು ಪ್ರವೇಶಿಸಿದೆ. ಸಾಮಾನ್ಯವಾಗಿ ಮಾನ್ಸೂನ್ ಕೇರಳ ಪ್ರವೇಶಿಸಿದ ಮೂರರಿಂದ ನಾಲ್ಕು ದಿನಗಳ ನಂತರ ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಮಳೆಯಾಗುತ್ತದೆ ಎಂದು ಬೆಂಗಳೂರು ಕೇಂದ್ರದ ಹವಾಮಾನ ಇಲಾಖೆ ತಿಳಿಸಿದೆ.
advertisement
ಮೇ 29ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಿದೆ. ಆದ್ದರಿಂದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ರಾಮನಗರ, ಚಾಮರಾಜನಗರ ಮತ್ತು ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಜೂನ್ 2ರಂದು ರಾತ್ರಿ ಅಥವಾ ಜೂ 3ರಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ | |
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ