ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಮನೋಜ ಹೆಗಡೆ, ದೀಪಕ ಶೇಟ್‌ ಆಯ್ಕೆ

posted in: ರಾಜ್ಯ | 0

ಕಾರವಾರ/ಶಿರಸಿ: ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಇಬ್ಬರು ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಶಿರಸಿ ತಾಲೂಕಿನ ಮನೋಜ ಆರ್‌. ಹೆಗಡೆ ದೇಶಕ್ಕೆ 213ನೇ ರ್ಯಾಂಕ್‌ ಪಡೆದಿದ್ದರೆ ಹೊನ್ನಾವರ ತಾಲ್ಲೂಕಿನ ಮಂಕಿ ಗ್ರಾಮದ ದೀಪಕ್ ಆರ್.ಶೇಟ್ 311ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಮನೋಜ ಆರ್‌.ಹೆಗಡೆ
ಮೂಲತಃ ಸಿದ್ದಾಪುರದ ಮನೋಜ್ ಆರ್. ಹೆಗಡೆ (29) ಅವರು ಯುಪಿಎಸ್‌ಸಿ ಪರೀಕ್ಷೆಯಲ್ಲಿ 213ನೇ ರ್ಯಾಂಕ್ ಪಡೆದಿದ್ದಾರೆ. ಇವರು ಮೂಲತಃ ಸಿದ್ದಾಪುರ ತಾಲೂಕಿನ ಹಣಗಾರ ಗ್ರಾಮದವರು. ಮನೋಜ್ ಹೆಗಡೆ ಅವರು ಪಶು ಸಂಗೋಪನೆ‌ ಇಲಾಖೆಯ ನಿವೃತ್ತ ಅಧಿಕಾರಿ ರಾಮನಾಥ ಹೆಗಡೆ ಹಾಗೂ ಪ್ರಾಥಮಿಕ ಶಾಲೆಯ ಶಿಕ್ಷಕಿ ಗೀತಾ ಹೆಗಡೆಯವರ ಪುತ್ರ.. 1ರಿಂದ 6ನೇ ತರಗತಿ ವರೆಗೆ ಉಂಚಳ್ಳಿ ಶಾಲೆಯಲ್ಲಿ ಓದಿದ್ದಾರೆ. ನಂತರ ಶಿರಸಿಯ ಲೈನ್ಸ್‌ ಶಾಲೆಯಲ್ಲಿ ಪ್ರೌಢಸಾಲೆ ಓದಿದ ನಂತರ ಶಿರಸಿ ಎಂಇಎಸ್‌ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡಿದ್ದಾರೆ. ನಂತರ ಧಾರವಾಡದ ಕೃಷಿ ವಿಶ್ವ ವಿದ್ಯಾಲಯದಲ್ಲಿ ಬಿಎಸ್‌ಸಿ (ಕೃಷಿ) ಪದವಿ ಪಡೆದಿದ್ದಾರೆ. ಇವರು ಶಾಲಾ ದಿನಗಳಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್‌ ಆಟಗಾರರಾಗಿದ್ದರು, ಹೈಸ್ಕೂಲ್‌ ಸಿನಗಳಲ್ಲಿ ಶಿರಸಿಯ ಲೈನ್ಸ್‌ ಶಾಲೆಯನ್ನು ರಾಜ್ಯಮಟ್ಟದ ಬ್ಯಾಡ್ಮಿಂಟನ್‌ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.

ಓದಿರಿ :-   ಭ್ರಷ್ಟಾಚಾರ ಆರೋಪದ ಬೆನ್ನಲ್ಲೇ ಬೆಂಗಳೂರು ನಗರ ಜಿಲ್ಲಾಧಿಕಾರಿ ಎತ್ತಂಗಡಿ

ದೀಪಕ ರಾಮಚಂದ್ರ ಶೇಟ್‌:
ಹೊನ್ನಾವರ ತಾಲ್ಲೂಕಿನ ಮಂಕಿ ಗ್ರಾಮದ ದೀಪಕ್ ಆರ್.ಶೇಟ್ 311ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಆರನೇ ತರಗತಿಯಿಂದ 10ನೇ ತರಗತಿಯವರೆಗೆ ಶಿರಸಿಯ ಮೊರಾರ್ಜಿ ಶಾಲೆಯಲ್ಲಿ ಓದಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅವರು ಶಾಲೆಗೆ ‘ಟಾಪರ್’ ಆಗಿದ್ದರು. ಮೂಡುಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಪಿ.ಯು. ಅಧ್ಯಯನ ಮಾಡಿ, ಬೆಂಗಳೂರಿನ ಆರ್.ವಿ.ಕಾಲೇಜಿನಲ್ಲಿ ಎಂಜಿನಿಯರಿಂಗ್ ಅಧ್ಯಯನ ಮಾಡಿದ್ದಾರೆ. ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಅವರು, ಯು.ಪಿ.ಎಸ್.ಸಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡು ಬೆಂಗಳೂರಿನಲ್ಲೇ ತರಬೇತಿಗೆ ಸೇರಿಕೊಂಡರು. ಅವರ ಕುಟುಂಬವು ಮಂಕಿ ಗ್ರಾಮದಲ್ಲಿದೆ.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 3

advertisement

ನಿಮ್ಮ ಕಾಮೆಂಟ್ ಬರೆಯಿರಿ