ಯುಪಿಎಸ್​ಸಿ ಪರೀಕ್ಷೆ: ಬೆಳಗಾವಿ ಇಬ್ಬರು ಅಭ್ಯರ್ಥಿಗಳ ಆಯ್ಕೆ

posted in: ರಾಜ್ಯ | 0

ಬೆಳಗಾವಿ: ಯುಪಿಎಸ್‌ಸಿ 2021ರ ನಾಗರಿಕ ಸೇವೆಗಳ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟವಾಗಿದ್ದು, ಬೈಲಹೊಂಗಲ, ರಾಯಬಾಗ ತಾಲೂಕಿನ ಇಬ್ಬರು ಅಭ್ಯರ್ಥಿಗಳು ಆಯ್ಕೆಯಾಗುವ ಮೂಲಕ ಬೆಳಗಾವಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಸಾಹಿತ್ಯ ಆಲದಕಟ್ಟಿ…
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಾಹಿತ್ಯ ಮಲ್ಲಿಕಾರ್ಜುನ ಆಲದಕಟ್ಟಿ ದೇಶಕ್ಕೆ 250ನೇ ರ್ಯಾಂಕ್‌ ಪಡೆದುಕೊಂಡಿದ್ದು, ರಾಜ್ಯಕ್ಕೆ 10ನೇ ರ್ಯಾಂಕ್‌ ಪಡೆದಿದ್ದಾರೆ.
ಇಂಜಿನಿಯರಿಂಗ್ ಪದವಿ ಮುಗಿಸಿರುವ ಸಾಹಿತ್ಯ ಮಲ್ಲಿಕಾರ್ಜುನ ಆಲದಕಟ್ಟಿ 5ನೇ ಪ್ರಯತ್ನದಲ್ಲಿ ಪಾಸಾಗಿದ್ದಾರೆ. ಇದಕ್ಕೂ ಮೊದಲು ಯುಪಿಎಸ್‌ಸಿ ಎರಡು ಮುಖ್ಯ ಪರೀಕ್ಷೆಗಳನ್ನು ಪಾಸಾಗಿದ್ದರು. ಆದರೆ, ಸಂದರ್ಶನದಲ್ಲಿ ಸಮಯದಲ್ಲಿ ಫೇಲ್ ಆಗಿದ್ದರು. ಈಗ ಸಂದರ್ಶನದಲ್ಲಿಯೇ ಹೆಚ್ಚು ಅಂಕ ಪಡೆದಿದ್ದಾರೆ.

ಗಜಾನನ ಬಾಳೆ…
ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಗಜಾನನ ಬಾಳೆ 953 ಅಂಕ ಪಡೆದು ದೇಶಕ್ಕೆ 319ನೇ ರ್ಯಾಂಕ್‌ ಪಡೆದಿದ್ದಾರೆ.
ಇಂಜಿನಿಯರಿಂಗ್ ಮುಗಿಸಿರುವ ಗಜಾನನ ಬಾಳೆ ಇವರು 2019ರ ಯುಪಿಎಸ್‌ಸಿ ಪರೀಕ್ಷೆಯಲ್ಲಿ 663 ರ್ಯಾಂಕ್‌ ಪಡೆದು ಸದ್ಯ ಇಂಡಿಯಲ್ ಪೋಸ್ಟಲ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಯುಪಿಎಸ್ ಪರೀಕ್ಷೆಯಲ್ಲಿ ಕನ್ನಡ ಸಾಹಿತ್ಯ ವಿಷಯ ತೆಗೆದುಕೊಂಡು ಪಾಸಾಗಿದ್ದಾರೆ.

ಓದಿರಿ :-   ಕರ್ನಾಟಕದಲ್ಲಿ 1 ಲಕ್ಷ ಎಲೆಕ್ಟ್ರಿಕ್ ವಾಹನಗಳ ನೋಂದಣಿ: ಸಚಿವ ಮುರುಗೇಶ್ ನಿರಾಣಿ

2

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

advertisement

ನಿಮ್ಮ ಕಾಮೆಂಟ್ ಬರೆಯಿರಿ