ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ಮಾಡಿದವರಿಗೆ ಕಠಿಣ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ

posted in: ರಾಜ್ಯ | 0

ಬೆಂಗಳೂರು: ರೈತ ನಾಯಕ ರಾಕೇಶ್ ಟಿಕಾಯತ್ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಬೆಂಗಳೂರಿನಲ್ಲಿ ಸೋಮವಾರ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರೈತ ನಾಯಕ ಟಿಕಾಯತ್ ಮುಖಕ್ಕೆ ಮಸಿ ಎರಚಿದ್ದಾರೆ.‌ ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಆದರೆ ನಾನು ಈ ಘಟನೆಯನ್ನು ಖಂಡಿಸುತ್ತೇನೆ .‌ದೈಹಿಕವಾಗಿ ಹಲ್ಲೆ ಮಾಡುವುದು, ಮಸಿ ಬಳಿಯುವುದು ತಪ್ಪು. ಘೋಷಣೆ ಕೂಗಿದ್ದು ಬಿಜೆಪಿಯವರಲ್ಲ ಎಂದರು.

advertisement

ಈ ಘಟನೆಯನ್ನು ನಾವು ಸಹಿಸುವುದಿಲ್ಲ. ಮೂವರನ್ನು ಬಂಧಿಸಿ ವಿಚಾರಣೆ ಗೆ ಒಳಪಡಿಸಿದ್ದಾರೆ. ಆ ಯುವಕರ ಹಿಂದೆ ಯಾರಿದ್ದಾರೆಂಬ ಬಗ್ಗೆ ವಿಚಾರಣೆ ನಡಿಯುತ್ತಿದೆ ಎಂದು ತಿಳಿಸಿದರು.
ರಾ.ಇಂತಹ ಘಟನೆಗೆ ಯಾರೂ ಪ್ರೋತ್ಸಾಹ ಕೊಡುವುದಿಲ್ಲ. ಇದು ಒಮ್ಮೆಲೇ ನಡೆದಿರುವ ಘಟನೆ.‌ ಆರೋಪಿಗಳನ್ನು ಜೈಲಿಗೆ ಕಳುಹಿಸಿ ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.

 

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ಓದಿರಿ :-   ಧರ್ಮ ಒಡೆಯುವ ಉದ್ದೇಶವಿರಲಿಲ್ಲ : ರಂಭಾಪುರೀ ಶ್ರೀಗಳ ಮುಂದೆ ಸಿದ್ದರಾಮಯ್ಯ ಪಶ್ಚಾತ್ತಾಪ

ನಿಮ್ಮ ಕಾಮೆಂಟ್ ಬರೆಯಿರಿ

advertisement