ರಾಜ್ಯಸಭಾ ಚುನಾವಣೆ : ಕಾಂಗ್ರೆಸ್‌ನಿಂದ ಜೈರಾಂ ರಮೇಶ, ಮನ್ಸೂರ್‌ ಅಲಿಖಾನ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಜೂನ್ ೧೦ ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಕೇಂದ್ರದ ಮಾಜಿ ಸಚಿವ ಹಾಗೂ ಹಾಲಿ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ಹಾಗೂ ಅಚ್ಚರಿಯ ಬೆಳವಣಿಗೆಯಲ್ಲಿ ೨ನೇ ಅಭ್ಯರ್ಥಿಯಾಗಿ ಮನ್ಸೂರ್ ಆಲಿಖಾನ್ ಇಬ್ಬರೂ ಸೋಮವಾರ ನಾಮಪತ್ರ ಸಲ್ಲಿಸಿದರು.

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಪಕ್ಷ ಒಂದು ಸ್ಥಾನವನ್ನು ಸುಲಭವಾಗಿ ಗೆಲ್ಲಲಿದೆ. ಈ ಒಂದು ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಹಾಲಿ ಸದಸ್ಯ ಜೈರಾಮ್ ರಮೇಶ್ ಅವರನ್ನೇ ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಜೈರಾಮ್ ರಮೇಶ್ ತಮ್ಮ ನಾಮಪತ್ರವನ್ನು ಚುನಾವಣಾಧಿಕಾರಿಯಾಗಿರುವ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ರಾಜ್ಯಸಭೆಯಲ್ಲಿನ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಉಪಸ್ಥಿತರಿದ್ದರು.
ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಪೈಪೋಟಿ ಇತ್ತು. ಈ ಬಾರಿ ಹೊಸಬರಿಗೆ ಟಿಕೆಟ್ ನೀಡಬೇಕು ಎಂಬ ಒತ್ತಾಯವಿದ್ದರೂ ಹೈಕಮಾಂಡ್ ಹಾಲಿ ಸದಸ್ಯ ಜೈರಾಮ್ ರಮೇಶ್ ಅವರನ್ನೇ ಮುಂದುವರೆಸುವ ತೀರ್ಮಾನ ಮಾಡಿದೆ. ಮನ್ಸೂರ್ ಆಲಿಖಾನ್ ಅವರನ್ನು ೨ನೇ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿರುವುದು ಕುತೂಹಲ ಕೆರಳಿಸಿದೆ.

ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement