ರಾಜ್ಯಸಭೆ ಚುನಾವಣೆ: ನಾಳೆ ಬಿಜೆಪಿಯಿಂದ ಜಗ್ಗೇಶ, ನಿರ್ಮಲಾ ಸೀತಾರಾಮನ್‌ ನಾಮಪತ್ರ

ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಚಿತ್ರನಟ ಜಗ್ಗೇಶ್ ನಾಳೆ, ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಕೆಗೆ ನಾಳೆ ಕಡೆಯ ದಿನವಾಗಿದ್ದು, ಬಿಜೆಪಿ ಅಭ್ಯರ್ಥಿಗಳಾಗಿ ನಿರ್ಮಲಾ ಸೀತಾರಾಮನ್ ಮತ್ತು ಜಗ್ಗೇಶ್ ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ.

ವಿಧಾನಸಭೆಯಲ್ಲಿ ಬಿಜೆಪಿ ಹೊಂದಿರುವ ಬಲಾಬಲದ ಆಧಾರದ ಮೇಲೆ ಇಬ್ಬರು ಅಭ್ಯರ್ಥಿಗಳನ್ನು ಸುಲಭವಾಗಿ ಆಯ್ಕೆ ಮಾಡಲು ಅಡ್ಡಿ ಆತಂಕಗಳಿಲ್ಲ. ಆದರೆ ಹೆಚ್ಚುವರಿ ಮತಗಳನ್ನು ಯಾರಿಗೆ ಚಲಾಯಿಸಬೇಕು ಎಂಬುದು ಪ್ರಶ್ನೆ.
ಜೆಡಿಎಸ್‍ನಿಂದ ಕುಪೇಂದ್ರ ರೆಡ್ಡಿ ಕಣಕ್ಕಿಳಿದರೆ ಹೆಚ್ಚುವರಿ ಮತಗಳನ್ನು ಅವರಿಗೆ ಹಾಕಬೇಕೆ ಬೇಡವೇ ಎಂಬ ಗೊಂದಲ ಪಕ್ಷದಲ್ಲಿ ಮುಂದುವರೆದಿದೆ. ಒಂದು ವೇಳೆ ಜೆಡಿಎಸ್ ಅಭ್ಯರ್ಥಿಗೆ ಹೆಚ್ಚುವರಿ ಮತಗಳನ್ನು ಚಲಾಯಿಸಿದರೆ ಕಾಂಗ್ರೆಸ್ ನಾಳೆ ಇದೇ ಅಸ್ತ್ರವನ್ನು ಮುಂದಿಟ್ಟುಕೊಂಡು ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂದು ಅಪಪ್ರಚಾರ ನಡೆಸಬಹುದೆಂಬ ಆತಂಕವಿದೆ.
ಮೂಲಗಳ ಪ್ರಕಾರ ಕಾಂಗ್ರೆಸ್ ಎರಡನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಬಿಜೆಪಿ ಜೆಡಿಎಸ್‍ನ ಕುಪೇಂದ್ರ ರೆಡ್ಡಿಯನ್ನು ಬೆಂಬಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಮಧ್ಯೆ ಬಿಜೆಪಿ ಮೂರನೇ ಅಭ್ಯರ್ಥಿಯನ್ನು ಕೊನೆ ಕ್ಷಣದಲ್ಲಿ ಕಣಕ್ಕಿಳಿಸಬಹುದು ಎಂದು ಹೇಳಲಾಗುತ್ತಿದೆ.

ಪ್ರಮುಖ ಸುದ್ದಿ :-   ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement