ಹೈಕೋರ್ಟ್‌ ಆದೇಶವಿದ್ದರೂ ಇಂದು ಮತ್ತೆ ಮಂಗಳೂರಿನಲ್ಲಿ ಹಿಜಾಬ್ ಧರಿಸಿ ಕಾಲೇಜಿಗೆ ಬಂದ 12 ವಿದ್ಯಾರ್ಥಿನಿಯರು…!

ಮಂಗಳೂರು:ಹಿಜಾಬ್ ಧರಿಸಿ ಶಾಲಾ- ಕಾಲೇಜಿಗೆ ಹೋಗುವಂತಿಲ್ಲ ಎಂದು ಹೈಕೋರ್ಟ್ ಈಗಾಗಲೇ ತೀರ್ಪು ನೀಡಿದೆ.
ಆದಾಗ್ಯೂ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿಶ್ವ ವಿದ್ಯಾಲಯ ಕಾಲೇಜಿನಲ್ಲಿ 12 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ.

ಮೇ 26ಕ್ಕೆ ಹಿಜಾಬ್ ವಿರೋಧಿಸಿ ಕಾಲೇಜು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು. ಆ ಬಳಿಕ ಹಿಜಾಬ್​ಗೆ ಅವಕಾಶವಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಸ್ಪಷ್ಟಪಡಿಸಿತ್ತು. ಆದರೂ ಶನಿವಾರ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಈ ವೇಳೆ ಪ್ರಾಂಶುಪಾಲರಾದ ಡಾ.ಅನುಸೂಯ ರೈ ತರಗತಿಗೆಪ್ರವೇಶಕ್ಕೆ ಅನುಮತಿ ನೀಡಿರಲಿಲ್ಲ. ಅಲ್ಲದೆ, ವಿದ್ಯಾರ್ಥಿನಿಯರಿಗೆ ಪ್ರಾಂಶುಪಾಲರು ಕೋರ್ಟ್‌ ಆದೇಶದ ಬಗ್ಗೆ ತಿಳಿಹೇಳಿದ್ದರು. ಹೀಗಿದ್ದರೂ ಆ 12 ವಿದ್ಯಾರ್ಥಿನಿಯರು ಇಂದು, ಸೋಮವಾರ (ಮೇ 30) ಮತ್ತೆ ಪುನಃ ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದಾರೆ. ಅವರಿಗೆ ಈ ಮೊದಲಿನಂತೆ ಪ್ರವೇಶ ನಿರಾಕರಿಸಲಾಗಿದೆ.
ನಂತರ ಜಿಲ್ಲಾಧಿಕಾರಿ ಕಚೇರಿಗೆ ವಿದ್ಯಾರ್ಥಿನಿಯರು ಆಗಮಿಸಿದ್ದಾರೆ. ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಿಸಿ ಡಾ.ಕೆ.ವಿ.ರಾಜೇಂದ್ರರವರಿಗೆ ಕಾಯುತ್ತಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement