ಕಾಶ್ಮೀರ: ಕುಲ್ಗಾಮ್‌ನಲ್ಲಿ ಸಾಂಬಾದ ಮಹಿಳಾ ಶಿಕ್ಷಕಿಯನ್ನು ಗುಂಡಿಕ್ಕಿ ಕೊಂದ ಭಯೋತ್ಪಾದಕರು

ಕಾಶ್ಮೀರ: ಮಂಗಳವಾರ ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗೋಪಾಲ್ಪೋರಾ ಪ್ರದೇಶದಲ್ಲಿ ವಲಸಿಗ ಕಾಶ್ಮೀರಿ ಮಹಿಳೆಯ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿ ಕೊಂದಿದ್ದಾರೆ.
ಮೃತ ಮಹಿಳೆ ಶಾಲಾ ಶಿಕ್ಷಕಿ ಮತ್ತು ಜಮ್ಮು ವಿಭಾಗದ ಸಾಂಬಾ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿ ನಡೆದ ಪ್ರದೇಶಕ್ಕೆ ಭದ್ರತಾ ಪಡೆಗಳು ದೌಡಾಯಿಸಿವೆ.

advertisement

ಪ್ರತಿ ಮಾಹಿತಿಯ ಪ್ರಕಾರ, ಕುಲ್ಗಾಮ್‌ನ ಗೋಪಾಲ್‌ಪೋರಾ ಹೈಸ್ಕೂಲ್‌ನಲ್ಲಿ ಮಹಿಳಾ ಶಿಕ್ಷಕಿಯ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಶೀಕ್ಷಕಿಯನ್ನು ಕುಲ್ಗಾಮ್‌ನ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದರು. ಹತ್ಯೆಯಾದ ಶಿಕ್ಷಕಿಯನ್ನು ಸಾಂಬಾ ಜಿಲ್ಲೆಯ ರಾಜ್ ಕುಮಾರ್ ಅವರ ಪತ್ನಿ ರಜನಿ ಎಂದು ಗುರುತಿಸಲಾಗಿದೆ.

ಆ ದಾಳಿಯು ಕಣಿವೆಯಲ್ಲಿ ನಾಗರಿಕ ಹತ್ಯೆಗಳ ಸರಣಿಯಲ್ಲಿ ಇತ್ತೀಚಿನದು. ಮೇ 12 ರಂದು ಬುದ್ಗಾಮ್ ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರ ರಾಹುಲ್ ಭಟ್ ಅವರನ್ನು ಉಗ್ರರು ಹತ್ಯೆ ಮಾಡಿದ್ದರು. ಕಳೆದ ವಾರ, ಬುದ್ಗಾಮ್‌ನ ಚದೂರ ಪ್ರದೇಶದಲ್ಲಿ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ಗುಂಡು ಹಾರಿಸಿ ಟಿವಿ ಕಲಾವಿದೆ ಅಮ್ರೀನ್ ಭಟ್ ಸಾವಿಗೀಡಾಗಿದ್ದರು.

ಓದಿರಿ :-   ಇಂದಿನಿಂದ ಕಾರ್ಬೆವ್ಯಾಕ್ಸ್ ಬೂಸ್ಟರ್ ಡೋಸ್ ಕೋವಿಡ್‌-19 ಲಸಿಕೆ ಲಭ್ಯ

 

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement