ಜೂನ್ 2ರಿಂದ ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ: ಕರಾವಳಿ-ಮಲೆನಾಡು ಸೇರಿ 10 ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಜೂನ್ 2 ಅಥವಾ ೩ಕ್ಕೆ ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಲಿದ್ದು, ಜೂನ್ 2ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ ಹಾಗೂ ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನೈರುತ್ಯ ಮಾನ್ಸೂನ್‌ ಮೇ 29 ರಂದು ಕೇರಳಕ್ಕೆ ಪ್ರವೇಶಿಸಿದ್ದು, ಜೂನ್ 2ರಿಂದ ಕರ್ನಾಟಕಕ್ಕೆ ಆಗಮಿಸಲಿದೆ ಎಂದು ಹೇಳಲಾಗಿದೆ. ಹೀಗಾಗಿ ಜೂನ್ 2 ರಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 2 ರ ರಾತ್ರಿಯಿಂದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳು ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಜೂನ್ 2 ರಿಂದ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ಕರ್ನಾಟಕ ಕರಾವಳಿ ಜಿಲ್ಲೆಗಳು ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement