ಜೂನ್ 2 ರಂದು ಹಾರ್ದಿಕ್ ಪಟೇಲ್ ಬಿಜೆಪಿ ಸೇರ್ಪಡೆ : ಪಕ್ಷದ ವಕ್ತಾರ

ಅಹಮದಾಬಾದ್: ಮಾಜಿ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಅವರು ಜೂನ್ 2ರಂದು ಗುಜರಾತ್ ಪಕ್ಷದ ಅಧ್ಯಕ್ಷ ಸಿಆರ್ ಪಾಟೀಲ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಲಿದ್ದಾರೆ ಎಂದು ಪಕ್ಷದ ರಾಜ್ಯ ವಕ್ತಾರರು ಮಂಗಳವಾರ ತಿಳಿಸಿದ್ದಾರೆ.
ಪಾಟಿದಾರ್ ಕೋಟಾ ಆಂದೋಲನದ ನಾಯಕ ಪಟೇಲ್ ಇತ್ತೀಚೆಗೆ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ನಂತರ, ಅವರು ಆಡಳಿತಾರೂಢ ಬಿಜೆಪಿಗೆ ಸೇರಬಹುದು ಎಂಬ ಊಹಾಪೋಹ ಇತ್ತು. ಕಾಂಗ್ರೆಸ್ ನಾಯಕತ್ವವನ್ನು ತೀವ್ರವಾಗಿ ಟೀಕಿಸಿದ ಅವರು ಬಿಜೆಪಿಯ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯವೈಖರಿಯನ್ನು ಶ್ಲಾಘಿಸಿದ್ದರು.

ಜೂನ್ 2 ರಂದು ರಾಜ್ಯಾಧ್ಯಕ್ಷ ಸಿ.ಆರ್.ಪಾಟೀಲ್ ಅವರ ಸಮ್ಮುಖದಲ್ಲಿ ಹಾರ್ದಿಕ್ ಪಟೇಲ್ ಬಿಜೆಪಿ ಸೇರುವುದು ಖಚಿತವಾಗಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ಯಜ್ಞೇಶ್ ದವೆ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಪಟೇಲ್ 2019 ರಲ್ಲಿ ಕಾಂಗ್ರೆಸ್ ಸೇರಿದ್ದರು.
ಈ ತಿಂಗಳ ಆರಂಭದಲ್ಲಿ ಕಾಂಗ್ರೆಸ್ ತೊರೆಯುವ ಮೊದಲು, ಪಟೇಲ್ ಅವರು ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ಕಟುವಾದ ಪತ್ರವನ್ನು ಬರೆದಿದ್ದರು. ದೇಶದಲ್ಲಿ ಕೆಲವು ಪ್ರಮುಖ ವಿಷಯಗಳ ಬಗ್ಗೆ ಕಾಂಗ್ರೆಸ್ ” ತಡೆಯೊಡ್ಡುವ ಪಾತ್ರವನ್ನು ಮಾತ್ರ ವಹಿಸಿದೆ” ಮತ್ತು “ಕೇವಲ ಎಲ್ಲವನ್ನೂ ವಿರೋಧಿಸಲು ಸೀಮಿತವಾಗಿದ್ದಾರೆ ಎಂದು ಪ್ರತಿಪಾದಿಸಿದ್ದರು.

ಪ್ರಮುಖ ಸುದ್ದಿ :-   ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಕ್ಷಿಣ ಭಾರತದ ಜನಪ್ರಿಯ ನಟರಾದ ಅದಿತಿ ರಾವ್ ಹೈದರಿ-ಸಿದ್ಧಾರ್ಥ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement