ದ್ವಿತೀಯ ಪಿಯು ಉತ್ತರ ಪತ್ರಿಕೆ ಮೌಲ್ಯಮಾಪಕರಿಗೆ ಶೇ.20ರಷ್ಟು ಸಂಭಾವನೆ ಹೆಚ್ಚಳ

posted in: ರಾಜ್ಯ | 0

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ಕಾರ್ಯ ಹಾಗೂ ಉತ್ತರ ಪತ್ರಿಕೆ ಮೌಲ್ಯಮಾಪನಕ್ಕೆ ಹಾಜರಾಗುವ ಸಿಬ್ಬಂದಿಗೆ ಶೇ.20ರಷ್ಟು ಸಂಭಾವನೆ ಹೆಚ್ಚಳ ಮಾಡಿ ಪದವಿ ಪೂರ್ವ ಶಿಕ್ಷಣ ಇಲಾಖೆಯು ಆದೇಶ ಹೊರಡಿಸಿದೆ.
ಈ ಸಂಭಾವನೆಯು ಮುಂದಿನ ಮೂರು ವರ್ಷಗಳವರೆಗೆ ಜಾರಿಯಲ್ಲಿರಲಿದೆ ಎಂದು ಹೇಳಿದೆ. ಆದರೆ ಸಂಭಾವನೆ ಪರಿಷ್ಕರಣೆಗೆ ಷರತ್ತುಗಳನ್ನು ಸಹ ವಿಧಿಸಿದೆ. ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳನ್ವಯಯುಜಿಸಿ ವೇತನ ಪಡೆಯುವ ಉಪನ್ಯಾಸಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದರೆ ಪ್ರಯಾಣ ಭತ್ಯೆ ಮತ್ತು ದಿನಭತ್ಯೆಯನ್ನು ಮಾತ್ರ ನೀಡಬೇಕು. ಇವರಿಗೆ ಬೇರೆ ಯಾವುದೇ ಸಂಭಾವನೆ ನೀಡುವಂತಿಲ್ಲ.
ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸುವ ಉಪನ್ಯಾಸಕರು ಎಸಗುವ ತಪ್ಪುಗಳಿಗೆ ವಿಧಿಸುವ ದಂಡವನ್ನು ಸೂಕ್ತವಾದ ನಿಯಮಗಳನ್ನು ರೂಪಿಸಿ ಕಾರ್ಯರೂಪಕ್ಕೆ ತರಬೇಕು. ಇದಕ್ಕೆ ತಗಲುವ ವೆಚ್ಚವನ್ನು ಯೋಜನೇತರ ಅಡಿಯಲ್ಲಿ ಪ್ರಸ್ತುತ ವರ್ಷದಲ್ಲಿ ಇಲಾಖೆಗೆ ಒದಗಿಸಿರುವ ಅನುದಾನದ ಮಿತಿಯಲ್ಲಿಯೇ ಭರಿಸಬೇಕು ಎಂದು ಹೇಳಿದೆ.
ಮೊದಲು 3 ಗಂಟೆಯ ಅವಧಿಯ ಕನ್ನಡ ಆವೃತ್ತಿಯಲ್ಲದ ಪ್ರಶ್ನೆ ಪತ್ರಿಕೆ ತಯಾರಿಸಲು ಪ್ರತಿಯೊಬ್ಬರಿಗೆ 2082 ರೂ.ನಿಗದಿ ಪಡಿಸಿತ್ತು. ಇದು 2,498 ರೂ.ಗಳಿಗೆ ಹೆಚ್ಚಳವಾಗಿದೆ. ವಾಹನ ಚಾಲಕರಿಗೆ 696 ರೂ. ನೀಡಲಾಗುತ್ತಿತ್ತು. ಇದರ ಪ್ರಮಾಣ 1253 ರೂ.ಗೆ ಏರಿಕೆಯಾಗಿದೆ.
ಈ ರೀತಿ ಪರೀಕ್ಷಾ ಕಾರ್ಯದಲ್ಲಿ ಭಾಗವಹಿಸಿರುವ ಹಾಗೂ ಮೌಲ್ಯಮಾಪನ ಕಾರ್ಯದಲ್ಲಿ ಭಾಗಿಯಾಗಿರುವ ಸಿಬ್ಬಂದಿಗೆ ಶೇ.20 ಹೆಚ್ಚಳ ಮಾಡಲಾಗುತ್ತದೆ ಎಂದು ಪಿಯು ಇಲಾಖೆ ಅಧೀನ ಕಾರ್ಯದರ್ಶಿ ಪದ್ಮಿನಿ ಎಸ್‌.ಎಸ್‌. ಆದೇಶ ಹೊರಡಿಸಿದ್ದಾರೆ. ಸಂಭಾವನೆ ಹೆಚ್ಚಳ ಮಾಡಿರುವುದಕ್ಕೆ ಪಿಯು ಉಪನ್ಯಾಸಕರ ಸಂಘ ಅಧ್ಯಕ್ಷ ಎ.ಎಚ್‌. ನಿಂಗೇಗೌಡ ಅಭಿನಂದನೆ ಸಲ್ಲಿಸಿದ್ದಾರೆ.

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

advertisement
ಓದಿರಿ :-   ಧಾರವಾಡ : 2021ನೇ ಸಾಲಿನ ರಾಷ್ಟ್ರೀಯ ಯುವ ಐಕಾನ್ ಪ್ರಶಸ್ತಿಗೆ ಕರ್ನಾಟಕ ವಿವಿಯ ಸಂಜಯಕುಮಾರ ಬಿರಾದಾರ ಆಯ್ಕೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement