ರಾಜ್ಯಸಭೆ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಝೀ ಮೀಡಿಯಾ ಮುಖ್ಯಸ್ಥ ಸುಭಾಷ್ ಚಂದ್ರ ಕಣಕ್ಕೆ..! ಬಿಜೆಪಿ ಅಚ್ಚರಿ ನಡೆ, ಕಾಂಗ್ರೆಸ್‌ಗೆ ಕಸಿವಿಸಿ

ನವದೆಹಲಿ: ರಾಜಸ್ಥಾನದಲ್ಲಿ ರಾಜ್ಯಸಭಾ ಚುನಾವಣೆಗೆ ಟ್ವಿಸ್ಟ್ ಆಗಿ ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿಯೊಬ್ಬರು ಅಚ್ಚರಿಯ ಎಂಟ್ರಿ ಕೊಟ್ಟಿದ್ದಾರೆ. ಮಾಧ್ಯಮ ಉದ್ಯಮಿ ಸುಭಾಷ್ ಚಂದ್ರ ಅವರ ಕೊನೆಕ್ಷಣದ ನಾಮನಿರ್ದೇಶನ ಮುಂದಿನ ವರ್ಷ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ಸ್ಥಾನಕ್ಕಾಗಿ ಸ್ಪರ್ಧೆ ಏರ್ಪಡಿಸಿದೆ.
ಎಸ್ಸೆಲ್ ಗ್ರೂಪ್‌ನ ಅಧ್ಯಕ್ಷರಾದ ಸುಭಾಷ್ ಚಂದ್ರ ಅವರು ರಾಜಸ್ಥಾನದ ರಾಜ್ಯಸಭಾ ಚುನಾವಣೆಗೆ ಐದನೇ ಅಭ್ಯರ್ಥಿಯಾಗಿದ್ದಾರೆ. ರಾಜಸ್ಥಾನದಲ್ಲಿ ನಾಲ್ಕು ರಾಜ್ಯಸಭಾ ಸ್ಥಾನಗಳಿವೆ; ಕಾಂಗ್ರೆಸ್ ಎರಡು ಮತ್ತು ಬಿಜೆಪಿ ಒಂದನ್ನು ಗೆಲ್ಲುವ ಸ್ಥಿತಿಯಲ್ಲಿದೆ.
ಈಗ ನಾಲ್ಕನೇ ಸ್ಥಾನಕ್ಕೆ ಸುಭಾಷ್ ಚಂದ್ರ ಐದನೇ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಮೂಲಕ ಪೈಪೋಟಿ ಏರ್ಪಟ್ಟಿದೆ. ಉತ್ತರ ಪ್ರದೇಶದ ನಿವಾಸಿಯಾಗಿರುವ ‘ಹೊರಗಿನವರಾದ’ ಕಾಂಗ್ರೆಸ್‌ನ ಪ್ರಮೋದ್ ತಿವಾರಿಗೆ ಅವರು ಸವಾಲು ಹಾಕಲಿದ್ದಾರೆ.
ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಭುಗಿಲೆದ್ದಿರುವ ಅಸಮಾಧಾನ ಮತ್ತು ಅಶೋಕ್ ಗೆಹ್ಲೋಟ್ ವರ್ಸಸ್ ಸಚಿನ್ ಪೈಲಟ್ ಕಲಹ ಯಾವ ಸಮಯದಲ್ಲಾದರೂ ಸ್ಫೋಟಗೊಳ್ಳುವ ಭೀತಿಯನ್ನು ಎದುರಿಸುತ್ತಿರುವಾಗ ಬಿಜೆಪಿ ಲೆಕ್ಕಾಚಾರದ ಹೆಜ್ಜೆ ಇಟ್ಟಿದೆ ಎಂದು ವರದಿಯಾಗಿದೆ.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಚುನಾವಣಾ ಭವಿಷ್ಯದ ಬಗ್ಗೆ ಅನುಮಾನಗಳನ್ನು ದೂರ ಮಾಡಿದ್ದಾರೆ. “ನಮ್ಮ ಮೂವರೂ ಅಭ್ಯರ್ಥಿಗಳು ಗೆಲ್ಲುತ್ತಾರೆ. ಬಿಜೆಪಿ ಸುಭಾಷ್ ಚಂದ್ರ ಅವರನ್ನು ಕಣಕ್ಕಿಳಿಸಿದೆ. ಅವರಿಗೆ (ಬಿಜೆಪಿ) ಸಾಕಷ್ಟು ಮತಗಳಿಲ್ಲ ಎಂದು ಅವರಿಗೆ (ಬಿಜೆಪಿ) ತಿಳಿದಿದೆ, ಅವರು ಕುದುರೆ ವ್ಯಾಪಾರ ಮಾಡುತ್ತಾರೆ ಮತ್ತು ರಾಜ್ಯದ ವಾತಾವರಣವನ್ನು ಹಾಳು ಮಾಡುತ್ತಾರೆ ಎಂದು ಆರೋಪಿಸಿದರು.

ಪ್ರಮುಖ ಸುದ್ದಿ :-   ವೀಡಿಯೊ...| ಹುಲಿ-ಕರಡಿ ಮಧ್ಯೆ "ಅಪರೂಪದ" ಮುಖಾಮುಖಿ; ಆಕ್ರಮಣಕಾರಿ ಕರಡಿಗೆ ಹುಲಿಯ ತಣ್ಣನೆಯ ಉತ್ತರ | ವೀಕ್ಷಿಸಿ

ರಾಜಸ್ಥಾನದಿಂದ ಮೂವರು ಅಭ್ಯರ್ಥಿಗಳು ರಣದೀಪ್ ಸುರ್ಜೆವಾಲಾ, ಮುಕುಲ್ ವಾಸ್ನಿಕ್ ಮತ್ತು ಪ್ರಮೋದ್ ತಿವಾರಿ ಅವರನ್ನು ಕಾಂಗ್ರೆಸ್‌ ನಾಮನಿರ್ದೇಶನ ಮಾಡಿದೆ. ವಸುಂಧರಾ ರಾಜೇ ಸಂಪುಟದ ಮಾಜಿ ಸಚಿವ ಘನಶ್ಯಾಮ್ ತಿವಾರಿ ಬಿಜೆಪಿ ಅಭ್ಯರ್ಥಿ.
200 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಯಲ್ಲಿ ಪ್ರತಿ ಅಭ್ಯರ್ಥಿ ಗೆಲುವಿಗೆ 41 ಮತಗಳ ಅಗತ್ಯವಿದೆ. ಕಾಂಗ್ರೆಸ್ 108 ಶಾಸಕರನ್ನು ಹೊಂದಿದ್ದು, ಬಿಜೆಪಿ 71 ಶಾಸಕರನ್ನು ಹೊಂದಿದೆ. ಅವರಿಗೆ 30 ಹೆಚ್ಚುವರಿ ಮತಗಳಿವೆ, ಆದರೆ ಎರಡನೇ ಸ್ಥಾನವನ್ನು ಗೆಲ್ಲಲು ಅವರಿಗೆ ಇನ್ನೂ 11 ಮತಗಳು ಬೇಕು. ಮೂರನೇ ಸ್ಥಾನ ಗೆಲ್ಲಲು ಕಾಂಗ್ರೆಸ್‌ಗೆ ಇನ್ನೂ 15 ಮತಗಳ ಅಗತ್ಯವಿದೆ. ಆದ್ದರಿಂದ ಸಣ್ಣ ಪಕ್ಷಗಳು ಮತ್ತು ಸ್ವತಂತ್ರರು ಯಾರತ್ತ ವಾಲುತ್ತಾರೆ ಎಂಬುದು ಮಹತ್ವದ ಪಾತ್ರ ವಹಿಸುತ್ತದೆ.
13 ಸ್ವತಂತ್ರರು, ಇಬ್ಬರು ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷದ (ಆರ್‌ಎಲ್‌ಪಿ) ಸದಸ್ಯರು, ಇಬ್ಬರು ಭಾರತೀಯ ಬುಡಕಟ್ಟು ಪಕ್ಷದ (ಬಿಟಿಪಿ) ಮತ್ತು ಇಬ್ಬರು ಸಿಪಿಎಂ ಶಾಸಕರು ನಿರ್ಣಾಯಕ ಅಂಶವಾಗಲಿದ್ದಾರೆ. ಬಿಜೆಪಿ ಪಕ್ಷೇತರರ ಮೇಲೆ ನಂಬಿದ್ದರೆ, ಕಾಂಗ್ರೆಸ್ ಸಣ್ಣ ಪಕ್ಷಗಳು ಮತ್ತು ಎಡಪಕ್ಷಗಳನ್ನು ಅವಲಂಬಿಸಿದೆ.

ಪ್ರಮುಖ ಸುದ್ದಿ :-   'ನಮ್ಮಲ್ಲಿಗೆ ಪ್ರವಾಸಕ್ಕೆ ಬನ್ನಿ, ನಮ್ಮ ಆರ್ಥಿಕತೆ ಬೆಂಬಲಿಸಿ' : ಹದಗೆಟ್ಟ ಸಂಬಂಧಗಳ ಮಧ್ಯೆ ಭಾರತದ ಪ್ರವಾಸಿಗರಿಗೆ ಮನವಿ ಮಾಡಿದ ಮಾಲ್ಡೀವ್ಸ್ ಸರ್ಕಾರ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement