ರಾಜ್ಯಸಭೆ ಚುನಾವಣೆ : ಬಿಜೆಪಿಯಿಂದ ಮೂರನೇ ಅಭ್ಯರ್ಥಿಯ ಘೋಷಣೆ…!

ಬೆಂಗಳೂರು: ರಾಜ್ಯಸಭೆಯ ಚುನಾವಣೆ ರಂಗೇರಿದ್ದು, ದಿನಕ್ಕೊಂದರಂತೆ ಅಚ್ಚರಿಯ ಬೆಳವಣಿಗೆಗಳು ನಡೆಯುತ್ತಿವೆ. ಅದರ ಮತ್ತೊಂದು ಮಜಲು ಎಂಬಂತೆ ಕಾಂಗ್ರೆಸ್‌ ಇಬ್ಬರು ಅಭ್ಯರ್ಥಿಗಳನ್ನು ಘೋಷಿಸಿದ ಬೆನ್ನಲ್ಲೇ ಬಿಜೆಪಿ ಈಗ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ..!

ರಾಜ್ಯಸಭೆಗೆ ಬಿಜೆಪಿಯ ಮೂರನೇ ಅಭ್ಯರ್ಥಿಯನ್ನಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಲೆಹರ್​ ಸಿಂಗ್ ಹೆಸರನ್ನು ಪಕ್ಷ ಘೋಷಣೆ ಮಾಡಿದೆ. ಜೆಡಿಎಸ್​ ತನ್ನ ಅಭ್ಯರ್ಥಿಯನ್ನು ದಿಢೀರ್ ಬದಲಾಯಿಸಿದ ಹಿಂದೆಯೇ ಬಿಜೆಪಿ ಈ ಹೆಜ್ಜೆ ಇರಿಸಿದೆ.
ಜೆಡಿಎಸ್​ ಅಭ್ಯರ್ಥಿ ದಿಢೀರ್ ಬದಲಾವಣೆ, ಕಾಂಗ್ರೆಸ್​ನಿಂದ ಎರಡನೇ ಹಾಗೂ ಬಿಜೆಪಿಯಿಂದ ಮೂರನೇ ಅಭ್ಯರ್ಥಿಯ ಘೋಷಣೆ ರಾಜ್ಯಸಭೆಯ ಕಣವನ್ನು ರಂಗೇರಿದೆ.

5 / 5. 3

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಲ್ಲೂ ತಮ್ಮ ಪಕ್ಷದಿಂದ ಸ್ಪರ್ಧೆ ; ಮಾಜಿ ಐಎಎಸ್ ಅಧಿಕಾರಿ ದಿವ್ಯಾ ಮಿತ್ತಲ್

ನಿಮ್ಮ ಕಾಮೆಂಟ್ ಬರೆಯಿರಿ

advertisement