ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ

posted in: ರಾಜ್ಯ | 0

ಬೆಂಗಳೂರು : ಭಾರತೀಯ ಆಡಳಿತ ಸೇವೆಯ ಹಿರಿಯ ಅಧಿಕಾರಿ ವಂದಿತಾ ಶರ್ಮಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಇಂದು, ಮಂಗಳವಾರ ಸಂಜೆ ಅಧಿಕಾರ ಸ್ವೀಕರಿಸಿದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ ರವಿಕುಮಾರ್ ಅವರ ವಯೋ ನಿವೃತ್ತಿಯಿಂದ ತೆರವಾದ ಹುದ್ದೆಗೆ ಕರ್ನಾಟಕ ವೃಂದದ ಭಾರತೀಯ ಆಡಳಿತ ಸೇವೆಯ 1986ನೇ ಬ್ಯಾಂಕ್‌ ತಂಡದ ವಂದಿತಾ ಶರ್ಮಾ ನೇಮಕವಾಗಿದ್ದಾರೆ. ವಂದಿತಾ ಶರ್ಮಾ ಅವರು ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುತ್ತಿರುವ ನಾಲ್ಕನೇ ಮಹಿಳೆಯಾಗಿದ್ದಾರೆ. ಸರ್ಕಾರದ 39ನೇ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ.

advertisement

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಈ ಹಿಂದೆ 2000 ನೇ ಇಸವಿಯಲ್ಲಿ ತೆರೇಸಾ ಭಟ್ಟಾಚಾರ್ಯ, 2006 ನೇ ಇಸವಿಯಲ್ಲಿ ಮಾಲತಿ ದಾಸ್ ಹಾಗೂ 2017ರಲ್ಲಿ ಕೆ. ರತ್ನಪ್ರಭಾ ಮುಖ್ಯಕಾರ್ಯದರ್ಶಿಯಾಗಿದ್ದರು.
ಈಗ ವಂದಿತಾ ಶರ್ಮಾ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸುವುದರೊಂದಿಗೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಇರುವ ಮೂರೂ ಪ್ರಮುಖ ಹುದ್ದೆಗಳನ್ನು ಮಹಿಳೆಯರೇ ಅಲಂಕರಿಸಿದಂತಾಗುತ್ತದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಹಾಗೂ ರಾಜ್ಯ ವಿಧಾನ ಪರಿಷತ್ ಕಾರ್ಯದರ್ಶಿಯಾಗಿ ಕೆ ಆರ್ ಮಹಾಲಕ್ಷ್ಮಿ ನೇಮಕವಾಗಿದ್ದು ಹೊಸ ದಾಖಲೆ ಸ್ಥಾಪಿಸಲಿದ್ದಾರೆ. ವಂದಿತಾ ಶರ್ಮಾ ಅವರ ನೇಮಕಾತಿಯಲ್ಲಿ ರಾಜ್ಯ ಸರ್ಕಾರವು ಎಂದಿನಂತೆ ಸೇವಾ ಹಿರಿತನವನ್ನು ಪುರಸ್ಕರಿಸಿದೆ. ವಂದಿತಾ ಶರ್ಮಾ ಅಧಿಕಾರಾವಧಿ ನವೆಂಬರ್ 30, 2022 ರವರೆಗೆ ಇದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಧರ್ಮ ಒಡೆಯುವ ಉದ್ದೇಶವಿರಲಿಲ್ಲ : ರಂಭಾಪುರೀ ಶ್ರೀಗಳ ಮುಂದೆ ಸಿದ್ದರಾಮಯ್ಯ ಪಶ್ಚಾತ್ತಾಪ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement