ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು

ಅಂಕೋಲಾ: ಲಾರಿ-ಬೈಕ್‌ ಡಿಕ್ಕಿ : ಇಬ್ಬರು ಬೈಕ್‌ ಸವಾರರು‌ ಸ್ಥಳದಲ್ಲೇ ಸಾವು

ಅಂಕೋಲಾ: ಬೈಕಿಗೆ ಲಾರಿ ಡಿಕ್ಕಿಯಾಗಿ ಬೈಕಿನಲ್ಲಿ ತೆರಳುತ್ತಿದ್ದ ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕಂಚಿನಬಾಗಿಲ ಬೊಗ್ರಿಬೈಲ್ ಸಮೀಪ ಸಂಭವಿಸಿದ ಬಗ್ಗೆ ವರದಿಯಾಗಿದೆ.

ಮೃತರನ್ನು ಅಗಸೂರಿನ ಬೊಮ್ಮಯ್ಯ ನಾಯಕ ಮತ್ತು ನಾರಾಯಣ ನಾಯಕ ಎಂದು ಗುರುತಿಸಲಾಗಿದೆ. ಬೈಕ್‌ ಗೆ ಡಿಕ್ಕಿಯಾದ ಲಾರಿಯು ಬೈಕ್ ಸವಾರರನ್ನು ಸುಮಾರು ಕೆಲವು ಮೀಟರುಗಳಷ್ಟು ಎಳೆದುಕೊಂಡು ಹೋಗಿದೆ ಎನ್ನಲಾಗಿದೆ.
ಲಾರಿ ಚಾಲಕ ಲಾರಿಯನ್ನು ಅಪಘಾತ ಸ್ಥಳದ ಸಮೀಪ ಬಿಟ್ಟು ಪರಾರಿಯಾಗಿದ್ದು, ಅಂಕೋಲಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಶಿರಸಿ : ನದಿ ಜೋಡಣೆ ಯೋಜನೆ ವಿರೋಧಿಸಿ ವಿದ್ಯಾರ್ಥಿಗಳ ಪತ್ರ ಚಳವಳಿ, ಪ್ರಧಾನಿ ಮೋದಿ, ಸಿಎಂ ಡಿಕೆಶಿಗೆ ಪತ್ರ ರವಾನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement