ಕೇಸರಿ ಧ್ವಜ ಹೇಳಿಕೆ: ಬಿಜೆಪಿ ನಾಯಕ ಈಶ್ವರಪ್ಪ ವಿರುದ್ಧ ದೆಹಲಿಯಲ್ಲಿ ದೂರು ದಾಖಲು

posted in: ರಾಜ್ಯ | 0

ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕೇಸರಿ ಧ್ವಜ ಮುಂದೊಂದು ದಿನ ಭಾರತದ ರಾಷ್ಟ್ರಧ್ವಜವಾಗಲಿದೆ ಎಂಬ ಕರ್ನಾಟಕ ಬಿಜೆಪಿ ಶಾಸಕ ಕೆಎಸ್ ಈಶ್ವರಪ್ಪ ಅವರ ಹೇಳಿಕೆಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡ ಸಂಜಯ್ ಸಿಂಗ್ ಪೊಲೀಸರಿಗೆ ದೂರು ನೀಡಿದ್ದಾರೆ.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಕೇಸರಿ ಧ್ವಜವನ್ನು ಸಾವಿರಾರು ವರ್ಷಗಳಿಂದ ಅನುಸರಿಸಿಕೊಂಡು ಬರುತ್ತಿದ್ದು, ಮುಂದೊಂದು ದಿನ ಅದು ರಾಷ್ಟ್ರಧ್ವಜವಾಗಬಹುದು ಎಂದು ಈಶ್ವರಪ್ಪ ಹೇಳಿದ್ದರು.
ಈ ಹೇಳಿಕೆ ಕುರಿತು ನಾರ್ತ್ ಅವೆನ್ಯೂ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕ ಈಶ್ವರಪ್ಪ ವಿರುದ್ಧ ದೂರು ದಾಖಲಿಸಲು ಅರ್ಜಿ ಸಲ್ಲಿಸಿರುವುದಾಗಿ ರಾಜ್ಯಸಭಾ ಸದಸ್ಯರೂ ಆಗಿರುವ ಸಿಂಗ್ ಹೇಳಿದ್ದಾರೆ. ಹೇಳಿಕೆ ನೀಡಿರುವ ಈಶ್ವರಪ್ಪ ಅವರನ್ನು ಬಂಧಿಸಬೇಕು ಎಂದು ಅವರು ಹೇಳಿದ್ದಾರೆ.
ಮುಂದೊಂದು ದಿನ ಕೇಸರಿ ಧ್ವಜ ಭಾರತದ ರಾಷ್ಟ್ರಧ್ವಜವಾಗಲಿದೆ ಎಂದು ಹೇಳುವ ಮೂಲಕ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಈಶ್ವರಪ್ಪ ವಿರುದ್ಧ ಎಫ್‌ಐಆರ್ ದಾಖಲಿಸಲು ಅರ್ಜಿ ಸಲ್ಲಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ಓದಿರಿ :-   ಧಾರವಾಡ: ಮಾರ್ವೇಲ್ ಕಂಪನಿ ಕ್ಯಾಂಪಸ್ ಸಂದರ್ಶನ
advertisement

ನಿಮ್ಮ ಕಾಮೆಂಟ್ ಬರೆಯಿರಿ