ಹುಬ್ಬಳ್ಳಿ : ಜೂನ್‌ 3ರಂದು ವಿಶ್ವ ಹಿಂದೂ ಪರಿಷದ್‌ನ ಪ್ರೇರಣಾ ಸೇವಾ ಸಂಸ್ಥೆಯ ನೂತನ ಕಟ್ಟಡ ಧರ್ಮಸಿರಿ ಉದ್ಘಾಟನೆ

posted in: ರಾಜ್ಯ | 0

ಹುಬ್ಬಳ್ಳಿ: ವಿಶ್ವ ಹಿಂದೂ ಪರಿಷದ್‌ನ ಉತ್ತರ ಕರ್ನಾಟಕ ಟ್ರಸ್ಟ್‌ ಪ್ರೇರಣಾ ಸೇವಾ ಸಂಸ್ಥೆಯ ನೂತನ ಕಟ್ಟಡ ಧರ್ಮಸಿರಿಯ ಉದ್ಘಾಟನಾ ಸಮಾರಂಭ ಜೂನ್‌ 3ರಂದು ಬೆಳಿಗ್ಗೆ 10:45ಕ್ಕೆ ನಗರದಲ್ಲಿ ನಡೆಯಲಿದೆ.
ಧರ್ಮಸಿರಿ ನೂತನ ಕಟ್ಟಡವು  ಹುಬ್ಬಳ್ಳಿಯ ವಿದ್ಯಾನಗರದ ಶಿರೂರ ಪಾರ್ಕಿನ ಪುರುಷೋತ್ತಮ ನಗರದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿದೆ. ನಗರದ ಮೂರು ಸಾವಿರ ಮಠದ ಶ್ರೀ ಗುರುಸಿದ್ಧ ರಾಜಯೋಗಿಂದ್ರ ಸ್ವಾಮೀಜಿ, ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಕೊಲ್ಲಾಪುರದ ಕನ್ಹೇರಿ ಸಿದ್ಧಗಿರಿಯ ಸಿದ್ಧಸಂಸ್ಥಾನ ಮಠದ ಶ್ರೀ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ, ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಗದಗ ಶಿವಾನಂದ ಮಠದ ಶ್ರೀ ಸದಾಶಿವಾನಂದ ಸ್ವಾಮೀಜಿ, ವಿಜಯಪುರ ಬಂಜಾರ ಶಂಕರಲಿಂಗ ಗುರುಪೀಠದ ಶ್ರೀ ಸೋಮಲಿಂಗ ಸ್ವಾಮೀಜಿ ಅವರು ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರದ ಕ್ಷೇತ್ರ ಸಂಘಚಾಲಕರಾದ ವಿ.ನಾಗರಾಜ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ವಿಶ್ವ ಹಿಂದೂ ಪರಿಷದ್‌ನ ನವದೆಹಲಿಯ ಕೇಂದ್ರೀಯ ಮಹಾಮಂತ್ರಿ ಮಿಲಿಂದ್‌ ಪರಾಂಡೆ ಅವರು ಮುಖ್ಯ ವಕ್ರಾರರಾಗಿ ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವ ಹಿಂದು ಪರಿಷದ್‌ನ ಪ್ರಾಂತ ಅಧ್ಯಕ್ಷರಾದ ಡಾ.ರಾಮನ ಗೌಡರು, ಪ್ರಾಂತ ಕಾರ್ಯದರ್ಶಿ ಗೋವರ್ಧನ ರಾವ್‌, ಪ್ರೇರಣಾ ಸಂಸ್ಥೆ ಅಧ್ಯಕ್ಷರಾದ ಸಂಜು ಬಡಸ್ಕರ ತಿಳಿಸಿದ್ದಾರೆ.

ಓದಿರಿ :-   ಕರ್ನಾಟಕದ ಕರಾವಳಿ ಭಾಗದಲ್ಲಿ ಮತ್ತೆ ಮಳೆ ಆರ್ಭಟದ ಮುನ್ಸೂಚನೆ: ಆರೆಂಜ್ ಅಲರ್ಟ್ ಘೋಷಣೆ

 

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ