ಪಠ್ಯಪುಸ್ತಕ ಪರಿಷ್ಕರಣೆ ವಿವಾದ ಕುರಿತು ಜೂನ್ 2ರಂದು ಶಿಕ್ಷಣ ಸಚಿವರಿಂದ ವರದಿ ಸಲ್ಲಿಕೆ: ಸಿಎಂ ಬೊಮ್ಮಾಯಿ

ಉಡುಪಿ: ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ ಅವರು ಸಲ್ಲಿಸುವ ವರದಿ ಆಧರಿಸಿ ಕ್ರಮಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಹೇಳಿದ್ದಾರೆ. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜನಮಾನಸದಲ್ಲಿ ಮೂಡಿರುವ ವಿವಾದಕ್ಕೆ ಸಂಬಂಧಿಸಿದಂತೆ ಸಮಗ್ರ ವರದಿ ಕೇಳಿದ್ದೇನೆ ಎಂದು ಹೇಳಿದರು.

ಈಗಾಗಲೇ ಶಾಲೆಗಳು ಪುನರಾರಂಭವಾಗಿರುವ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವರ ವರದಿ ತಲುಪಲು ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ವರದಿಗಾರರು ಪ್ರಶ್ನಿಸಿದಾಗ, ಜೂನ್ 2 ರಂದು ಅದು ತನಗೆ ತಲುಪಲಿದೆ ಎಂದು ಉತ್ತರಿಸಿದ ಮುಖ್ಯಮಂತ್ರಿ ಬೊಮ್ಮಾಯಿ ”ಪಠ್ಯಪುಸ್ತಕಕ್ಕೆ ಮಾಡಿದ ಪರಿಷ್ಕರಣೆಯ ಪರವಾಗಿ ಒಂದು ಗುಂಪಿನ ಜನರ ಅಭಿಪ್ರಾಯವೂ ಇದೆ. ಹೀಗಾಗಿ ಸಮಗ್ರ ನಿರ್ಧಾರ ಕೈಗೊಳ್ಳಲಾಗುವುದು,” ಎಂದರು.

ಕೆಲವು ಲೇಖಕರು ತಮ್ಮ ಪಠ್ಯಕ್ರಮದಲ್ಲಿ ಸೇರಿಸಿರುವ ತಮ್ಮ ಪಾಠಗಳನ್ನು ಕಲಿಸುವುದು ಬೇಡ ಎಂದು ಹೇಳಿದ್ದು ಇದಕ್ಕೆ ನೀಡಿರುವ ಅನುಮತಿಯನ್ನೂ ಹಿಂಪಡೆಯುವುದಾಗಿ ಪತ್ರ ಬರೆದುದಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಅವರನ್ನೂ ಸಂಪರ್ಕಿಸುವುದಾಗಿ ಹೇಳಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement