ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

posted in: ರಾಜ್ಯ | 0

ಬೆಳಗಾವಿ: ಸುವರ್ಣ ವಿಧಾನಸೌಧದ ಭದ್ರತೆ, ಸ್ವಚ್ಛತೆ ಹಾಗೂ ಅದರ ಘನತೆ ಕಾಪಾಡುವ ನಿಟ್ಟಿನಲ್ಲಿ ಒಟ್ಟಾರೆ ನಿರ್ವಹಣಗೆ ಸಂಬಂಧಿಸಿದಂತೆ ಸರಕಾರದ ಮಾರ್ಗಸೂಚಿ ಪ್ರಕಾರ ಎಲ್ಲ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದ್ದಾರೆ.
ನಗರದ ಹೊರಹೊಲಯದಲ್ಲಿರುವ ಸುವರ್ಣ ವಿಧಾನಸೌಧಕ್ಕೆ ಬುಧವಾರ(ಜೂ.1) ಭೇಟಿ ನೀಡಿ ಪರಿಶೀಲಿಸಿದ ಅವರು, ಸುವರ್ಣ ವಿಧಾನಸೌಧದ ನಿರ್ವಹಣೆ ಮಾಡುತ್ತಿರುವ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಹಾಗೂ ಕಾರ್ಮಿಕರ ಜತೆ ಚರ್ಚೆ ನಡೆಸಿದರು.

advertisement

ಸುವರ್ಣ ವಿಧಾನಸೌಧದ ಮುಂದೆ ಶಾವಿಗೆ ಹಾಗೂ ಸಂಡಿಗೆ ಒಣಹಾಕಿದ್ದ ಮಹಿಳಾ ಕಾರ್ಮಿಕರೊಬ್ಬರ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಮುಂಬರುವ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ನಿಗಾ ವಹಿಸಬೇಕು. ಸ್ವಚ್ಛತೆ ಸೇರಿದಂತೆ ಮತ್ತಿತರ ದೈನಂದಿನ ನಿರ್ವಹಣೆಯ ಕೆಲಸಕಾರ್ಯಗಳಿಗೆ ನಿಯೋಜಿಸಲಾಗುವ ಸಿಬ್ಬಂದಿ ಹಾಗೂ ಕಾರ್ಮಿಕರು ಶಿಸ್ತುಬದ್ಧವಾಗಿ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ನಿ
ಭದ್ರತೆಗೆ ಸಂಬಂಧಿಸಿದಂತೆ ಪ್ರತಿಯೊಬ್ಬರನ್ನುಗುರುತಿನ ಚೀಟಿ ಪರಿಶೀಲಿಸಿ ಪ್ರವೇಶ ನೀಡಬೇಕು ಎಂದು ನಿರ್ದೇಶನ ನೀಡಿದ ಅವರು, ಯಾವುದೇ ರೀತಿಯ ಅಚಾತುರ್ಯ ಉಂಟಾದರೆ ಸಂಬಂಧಪಟ್ಟವರನ್ನೇ ಹೊಣೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಸಂಜೀವಕುಮಾರ ಅವರು, ಸುವರ್ಣ ವಿಧಾನದೌಧದ ನಿರ್ವಹಣೆಯ ಕುರಿತು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ , ಪೊಲೀಸ್ ಅಧಿಕಾರಿಗಳು ಇದ್ದರು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ಸಾಹಿತ್ಯ ವಿಮರ್ಶಕ ಪ್ರೊ. ಎಂ.ಎಚ್​.ಕೃಷ್ಣಯ್ಯ ನಿಧನ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement