ಮುಂಬೈಯಲ್ಲೇ 739 ಹೊಸ ಕೊವಿಡ್ ಪ್ರಕರಣ ಪತ್ತೆ; ಮಹಾರಾಷ್ಟ್ರದಲ್ಲಿ ಸಾವಿರ ದಾಟಿದ ದೈನಂದಿನ ಪ್ರಕರಣಗಳ ಸಂಖ್ಯೆ..!

ಮುಂಬೈ: ಮಹಾರಾಷ್ಟ್ರದಲ್ಲಿ ಮತ್ತೆ ಕೊವಿಡ್ ಪ್ರಕರಣ ಏರಿಕೆ ಆಗಿದ್ದು ಬುಧವಾರ 1,081 ಹೊಸ ಪ್ರಕರಣಗಳು ವರದಿ ಆಗಿವೆ.
ಈ ಮೊದಲು ಫೆಬ್ರುವರಿ 24ರಲ್ಲಿ 1,124 ಪ್ರಕರಣಗಳೊಂದಿಗೆ ಅತೀ ಹೆಚ್ಚು ಕೊವಿಡ್ ಪ್ರಕರಣಗಳು ವರದಿಯಾಗಿದೆ. ಬುಧವಾರ, ಮುಂಬೈಯಲ್ಲೇ 739 ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಏತನ್ಮಧ್ಯೆ, ಬೃಹನ್ಮುಂಬೈ ಕಾರ್ಪೊರೇಷನ್ ಕಮಿಷನರ್ ಇಕ್ಬಾಲ್ ಸಿಂಗ್ ಚಹಾಲ್ ಅವರು ಸೋಂಕು ಪತ್ತೆ ಮತ್ತು ಲಸಿಕೆ ಪ್ರಕ್ರಿಯೆಗಳನ್ನು ಹೆಚ್ಚಿಸುವಂತೆ ಆದೇಶಿಸಿದ್ದಾರೆ. ಮುಂಗಾರು ಸನಿಹವಾಗುತ್ತಿದ್ದಂತೆ ರೋಗ ಲಕ್ಷಣಗಳಿರುವ ಕೊವಿಡ್-19 ಪ್ರಕರಣಗಳು ಹೆಚ್ಚುವ ಸಾಧ್ಯತೆ ಇದೆ ಎಂದು ಕಮಿಷನರ್ ಹೇಳಿದ್ದಾರೆ.

ಧಾರಾವಿ ಕೊಳಚೆಗೇರಿಯಲ್ಲಿ ಹೊಸ 10 ಪ್ರಕರಣಗಳು ಪತ್ತೆಯಾಗಿದೆ ಎಂದು ಬಿಎಂಸಿ ಅಧಿಕಾರಿಗಳು ಹೇಳಿದ್ದಾರೆ. ಈ ಪ್ರಕರಣಗಳೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 37ಕ್ಕೇರಿದೆ. ಮೇ ತಿಂಗಳ ಆರಂಭ ವಾರದಲ್ಲಿ ಇಲ್ಲಿ ಯಾವುದೇ ಕೊವಿಡ್ ಪ್ರಕರಣಗಳು ವರದಿ ಆಗಿರಲಿಲ್ಲ. ಆದರೆ ಮೇ 15ರ ನಂತರ ಪ್ರಕರಣಗಳಲ್ಲಿ ಏರಿಕೆ ಕಂಡಿದೆ.
ರಾಜ್ಯದಲ್ಲಿ ಮಂಗಳವಾರ 711 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿತ್ತು, ಸೋಮವಾರ 431 ಸೋಂಕುಗಳು ದಾಖಲಾಗಿವೆ. ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 4,032 ಆಗಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಯಾವುದೇ ಕೊವಿಡ್ ಸಂಬಂಧಿತ ಸಾವುಗಳು ವರದಿಯಾಗಿಲ್ಲ.

ಪ್ರಮುಖ ಸುದ್ದಿ :-   ಗೂಢಲಿಪಿ ಬಹಿರಂಗಗೊಳಿಸಲು ಒತ್ತಾಯಿಸಿದರೆ ಭಾರತದಿಂದ ನಿರ್ಗಮಿಸಬೇಕಾಗ್ತದೆ ಎಂದ ವಾಟ್ಸಾಪ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement